ADVERTISEMENT

ಬೇತಮಂಗಲ: ಗಡಿ ಭಾಗದಲ್ಲಿ ಕನ್ನಡ ಡಿಂಡಿಮ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 6:51 IST
Last Updated 2 ನವೆಂಬರ್ 2022, 6:51 IST
ಬೇತಮಂಗಲದ ಬಸ್ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮೆರವಣಿಗೆ ನಡೆಯಿತು
ಬೇತಮಂಗಲದ ಬಸ್ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮೆರವಣಿಗೆ ನಡೆಯಿತು   

ಬೇತಮಂಗಲ: ನಾಡಿನ ಗಡಿ ಭಾಗವಾದ ಬೇತಮಂಗಲದಲ್ಲಿ ಕನ್ನಡಾಭಿಮಾನಿಗಳು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಿದರು.

ಬೇತಮಂಗಲ ಗ್ರಾಮದ ಬಸ್ ನಿಲ್ದಾಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಆಟೊ ಚಾಲಕರ ಸಂಘ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ಬೇತಮಂಗಲ ಪೊಲೀಸ್ ಠಾಣೆಯ ಪಿಎಸ್‌ಐ ಜಗದೀಶ್ ರೆಡ್ಡಿ ಧ್ವಜಾರೋಹಣ ನೆರವೇರಿಸಿದರು. ಪಲ್ಲಕ್ಕಿ ಮೂಲಕ ಭುವನೇಶ್ವರಿ ದೇವಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ADVERTISEMENT

ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.