
ಮುಳಬಾಗಿಲು: ನೆರೆಯ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಂತಿರುವ ತಾಲ್ಲೂಕಿನ ತಿಮ್ಮರಾವುತ್ತನಹಳ್ಳಿ ಗ್ರಾಮದ ಬಳಿಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾಗಿದ್ದ ಕನ್ನಡದ ಧ್ವಜಕ್ಕೆ ಅಳವಡಿಸಿದ್ದ ಸಿಮೆಂಟ್ ದಿಂಡನ್ನು ಕಿಡಿಗೇಡಿಗಳು ಧ್ವಂಸಗೊಳಿರುವ ಹಿನ್ನೆಲೆ ಧ್ವಜಸ್ತಂಭ ನೆಳಕ್ಕುರಳಿರುವ ಘಟನೆ ಸೋಮವಾರ ನಡೆದಿದೆ.
ಈ ಹಿಂದೆ ಇದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಮಿತಿ ತಾಲ್ಲೂಕಿನ ನಾಲ್ಕೂ ಗಡಿಗಳಲ್ಲಿ ಸಿಮೆಂಟ್ ಗೋಡೆಗಳನ್ನು ನಿರ್ಮಿಸಿ ಕನ್ನಡ ಬಾವುಟಗಳನ್ನು ನಿಲ್ಲಿಸಿದ್ದರು. ಆದರೆ, ಕಿಡಿಗೇಡಿಗಳು ಅದರಲ್ಲಿ ಒಂದನ್ನು ನಾಶಗೊಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕನ್ನಡ ಪರ ಸಂಘಟನೆ ಮುಖಂಡರು ಭೇಟಿ ನೀಡಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.
ಮುಳಬಾಗಿಲು ಗ್ರಾಮಾಂತರ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅರುಣ್ ಗೌಡ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ನಂತರ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರಸವೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.