ADVERTISEMENT

ಕನ್ನಡ ರಾಜ್ಯೋತ್ಸವ: ವಿಜೃಂಭಣೆ ಆಚರಣೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 14:39 IST
Last Updated 18 ಅಕ್ಟೋಬರ್ 2019, 14:39 IST

ಕೋಲಾರ: ‘ಜಿಲ್ಲೆಯಾದ್ಯಂತ ನ.1ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಇಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಜಿಲ್ಲಾ ಕೇಂದ್ರದಲ್ಲಿ ನ.1ರಂದು ಬೆಳಿಗ್ಗೆ 10.30ಕ್ಕೆ ಗಾಂಧಿವನದಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಗುತ್ತದೆ.ವಿಶೇಷ ಉಪನ್ಯಾಸ, ಕಲಾ ತಂಡಗಳ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ಮೆರವಣಿಗೆ ಮಾಡಲಾಗುತ್ತದೆ’ ಎಂದರು.

‘ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನವೆಂಬರ್ ತಿಂಗಳಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯ ಚಲನಚಿತ್ರಗಳನ್ನು ಪ್ರದರ್ಶಿಸಬೇಕು. ರಾಜ್ಯೋತ್ಸವದ ಮೆರವಣಿಗೆಗೆ ಆನೆ ತರಿಸಲಾಗುವುದು’ ಎಂದು ವಿವರಿಸಿದರು.

ADVERTISEMENT

‘ಮೆರವಣಿಗೆಗೆ ಪ್ರತಿ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಕೈಗಾರಿಕೆಗಳಿಂದ ಸ್ತಬ್ಧಚಿತ್ರಗಳು ಬರಬೇಕು. ಮೆರವಣಿಗೆ ಅಂತ್ಯದವರೆಗೂ ಸ್ತಬ್ಧಚಿತ್ರಗಳು ಭಾಗವಹಿಸಬೇಕು. ಕನ್ನಡ ರಾಜ್ಯೋತ್ಸವದ ದಿನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಬೇಕು’ ಎಂದು ಕನ್ನಡ ಭುವನೇಶ್ವರಿ ಸಂಘದ ಅಧ್ಯಕ್ಷ ತ್ಯಾಗರಾಜ್‌ ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಜಾಹ್ನವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಗಾನಂದ ಕೆಂಪರಾಜ್, ಕಲಾವಿದ ಡಿ.ಆರ್.ರಾಜಪ್ಪ ಹಾಗೂ ಕನ್ನಡಪರ ಸಂಘಟನೆಗಳ ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.