ADVERTISEMENT

ಯತ್ನಾಳ್‌ ಹೇಳಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 4:37 IST
Last Updated 23 ನವೆಂಬರ್ 2020, 4:37 IST
ಮಾಲೂರು ಪಟ್ಟಣದ ಮಾರಿಕಾಂಭ ವೃತ್ತದಲ್ಲಿ ಕರವೇ(ಪ್ರವೀಣ್ ಕುಮಾರ್ ಶೆಟ್ಟಿ) ಕಾರ್ಯ‌ಕರ್ತರು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು 
ಮಾಲೂರು ಪಟ್ಟಣದ ಮಾರಿಕಾಂಭ ವೃತ್ತದಲ್ಲಿ ಕರವೇ(ಪ್ರವೀಣ್ ಕುಮಾರ್ ಶೆಟ್ಟಿ) ಕಾರ್ಯ‌ಕರ್ತರು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು    

ಮಾಲೂರು: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಪಟ್ಟಣದ ಮಾರಿಕಾಂಭ ವೃತ್ತದಲ್ಲಿ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ) ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಬಳಿಕ ಯತ್ನಾಳ್‌ ಅವರ ಭೂತದಹನ ಮಾಡಿದರು.

ಕರವೇ ತಾಲ್ಲೂಕು ಅಧ್ಯಕ್ಷ ಶಿವಾರ ನಾರಾಯಣಸ್ವಾಮಿ ಮಾತನಾಡಿ, ಯತ್ನಾಳ್ ಅವರು ಕರ್ನಾಟಕ ಬಂದ್ ಮಾಡುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಕನ್ನಡಪರ ಸಂಘಟನೆಗಳ ಹೋರಾಟಗಾರರನ್ನು ಕೆಣಕಿದ್ದಾರೆ ಎಂದು ದೂರಿದರು.

50 ವರ್ಷಗಳಿಂದ ನಾಡು-ನುಡಿ, ಗಡಿ, ಭಾಷೆಗೆ ಕುತ್ತು ಬಂದಾಗ ಕನ್ನಡಪರ ಸಂಘಟನೆಗಳು ಧ್ವನಿ ಎತ್ತಿವೆ. ಆದರೆ, ರೋಲ್‌ಕಾಲ್‌ ಹೋರಾಟಗಾರರು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಕನ್ನಡ ವಿರೋಧಿ ಶಾಸಕರಿಗೆ ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಿರಿ ನೀಡಬಾರದು ಎಂದು ಆಗ್ರಹಿಸಿದರು.

ADVERTISEMENT

ಕೂಡಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕನ್ನಡ ಪರ ಹೋರಾಟಗಾರರ ಕ್ಷಮೆ ಕೇಳಬೇಕು. ಇಲ್ಲವಾದರೆ ಇಡೀ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಕರವೇ ಜಿಲ್ಲಾ ಉಪಾಧ್ಯಕ್ಷ ಕೋಪ್ಪ ಚಂದ್ರು, ಪಾಪರೆಡ್ಡಿ, ಎ.ಎನ್. ದಯಾನಂದ್, ಮಣಿಗಂಡನ್, ದಾಕ್ಷಾಯಿಣಿ, ಐರನ್ ಅಮರ್, ನಾರಾಯಣಸ್ವಾಮಿ, ಆನಂದ್, ಗೋಪಿ, ಮಂಜುನಾಥ್, ನರೇಶ್, ಚಲಪತಿ, ಮಿಥುನ್, ಸುರೇಶ್ ರೆಡ್ಡಿ, ರಮೇಶ್, ಷಣ್ಮುಗಂ, ಸುಂದರೇಶ್ ಗೌಡ ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.