ADVERTISEMENT

ಕೋಲಾರದಲ್ಲಿ ಸ್ಪರ್ಧೆಗೆ ಮಾನಸಿಕವಾಗಿ ಸಿದ್ಧ: ಮಾಜಿ ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 11:46 IST
Last Updated 1 ಏಪ್ರಿಲ್ 2023, 11:46 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಕೋಲಾರ: ‘ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆಗೆ ನಾನು ಮಾನಸಿಕವಾಗಿ ಸಿದ್ಧವಾಗಿದ್ದೇನೆ. ಆದರೆ, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ’ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಏ.4ರಂದು ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ವರುಣಾದಲ್ಲೂ ಸ್ಪರ್ಧೆ ಮಾಡುತ್ತೇನೆ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ನನ್ನ ತವರೂರಾಗಿರುವ ಕಾರಣ ಅಲ್ಲಿ ಕಣಕ್ಕಿಳಿಯುತ್ತಿದ್ದೇನೆ. ಅಲ್ಲಿಯೇ ನನ್ನ ರಾಜಕೀಯ ಪ್ರಾರಂಭವಾಗಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.