ADVERTISEMENT

ವರ್ತೂರು ಪ್ರಕಾಶ್‌ ಅಪಹರಣ ಪ್ರಕರಣ: ಪ್ರಮುಖ ಆರೋಪಿ ಕವಿರಾಜ್‌ ಭೂಗತ ಪಾತಕಿಯ ಸಹಚರ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 16:38 IST
Last Updated 13 ಡಿಸೆಂಬರ್ 2020, 16:38 IST
ಮಾಜಿ ಸಚಿವ ವರ್ತೂರು ಪ್ರಕಾಶ್
ಮಾಜಿ ಸಚಿವ ವರ್ತೂರು ಪ್ರಕಾಶ್   

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಕವಿರಾಜ್‌ ಈ ಹಿಂದೆ ಭೂಗತ ಪಾತಕಿ ರವಿ ಪೂಜಾರಿಯ ಸಹಚರನಾಗಿದ್ದ ಎಂದು ಉನ್ನತ ಪೊಲೀಸ್‌ ಮೂಲಗಳು ತಿಳಿಸಿವೆ.

ಕವಿರಾಜ್‌ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಗುಂಪು ಕಟ್ಟಿಕೊಂಡು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯಗಳನ್ನು ಎಸಗಿದ್ದ. ಆತನ ವಿರುದ್ಧ ಬೆಂಗಳೂರಿನ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಪಿಯುಸಿ ಓದಿರುವ ಕವಿರಾಜ್‌ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡುತ್ತಿದ್ದ. ಮೂಲತಃ ನೇಪಾಳದಆತ ತಮಿಳುನಾಡಿನ ಚೆನ್ನೈ ಹಾಗೂ ಹೊಸೂರು ಸುತ್ತಮುತ್ತ ಭೂ ವ್ಯವಹಾರ ಮಾಡುತ್ತಿದ್ದ. ಈತ ವರ್ತೂರು ಪ್ರಕಾಶ್‌ ಅವರಿಗೆ ಬೆಂಗಳೂರಿನಲ್ಲಿ ಪರಿಚಯವಾಗಿದ್ದ. ಕವಿರಾಜ್‌ ಹಣಕ್ಕಾಗಿ ಸಂಚು ರೂಪಿಸಿ 8 ಮಂದಿಯ ಗುಂಪು ಕಟ್ಟಿಕೊಂಡು ವರ್ತೂರು ಪ್ರಕಾಶ್‌ರನ್ನು ಅಪಹರಿಸಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಅಪಹರಣಕಾರರು ವರ್ತೂರು ಪ್ರಕಾಶ್‌ರನ್ನು ಚಿಂತಾಮಣಿ ಮತ್ತು ಶ್ರೀನಿವಾಸಪುರ ಸುತ್ತಮುತ್ತ ಸುತ್ತಾಡಿಸಿದ್ದರು. ತಮಿಳುನಾಡಿಗೆ ಪರಾರಿಯಾಗಿದ್ದ ಕವಿರಾಜ್‌ನನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿಯಲಾಯಿತು. ವರ್ತೂರು ಪ್ರಕಾಶ್‌ ಅವರನ್ನು ಕೊಲೆ ಮಾಡುವ ಉದ್ದೇಶವಿರಲಿಲ್ಲ ಆತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.