ADVERTISEMENT

ಕೋಲಾರ: ಎಸ್‌ಎನ್‌ಎನ್‌ಗೆ ಸಚಿವ ಸ್ಥಾನ ನೀಡದಂತೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 7:48 IST
Last Updated 30 ಅಕ್ಟೋಬರ್ 2025, 7:48 IST
ಕೋಲಾರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಕೆಲ ದಾಖಲೆ ಪ್ರದರ್ಶಿಸಿದರು
ಕೋಲಾರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಕೆಲ ದಾಖಲೆ ಪ್ರದರ್ಶಿಸಿದರು   

ಕೋಲಾರ: ‘ಭ್ರಷ್ಟಾಚಾರ ಹಾಗೂ ಅಧಿಕಾರ ದುರ್ಬಳಿಕೆ ಆರೋಪ ಎದುರಿಸುತ್ತಿರುವ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸಚಿವ ಸ್ಥಾನಕ್ಕೆ ಲಾಬಿ ಮಾಡುತ್ತಿದ್ದು, ಅವರಿಗೆ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು’ ಎಂದು ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ಆಡಳಿತರೂಢ ಸರ್ಕಾರಕ್ಕೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಕಳಂಕ ಉಂಟಾಗಲಿದೆ’ ಎಂದರು.

‘ನಾರಾಯಣಸ್ವಾಮಿ ಅವರ ಪ್ರತಿ ಹಗರಣದ ದಾಖಲೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಆಶೋಕ ಅವರಿಗೆ ನೀಡುತ್ತೇನೆ’ ಎಂದು ಹೇಳಿದರು.

ADVERTISEMENT

‘ಸರ್ಕಾರಿ ಭೂಮಿ ಒತ್ತುವರಿ ಸೇರಿದಂತೆ ನಾರಾಯಣಸ್ವಾಮಿ ಮೇಲೆ ಹಲವಾರು ಗಂಭೀರ ಆರೋಪಗಳಿದೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಲೋಕಾಯುಕ್ತದಲ್ಲೂ ಪ್ರಕರಣವಿದೆ’ ಎಂದು ಆರೋಪಿಸಿದರು.

‘ನಾರಾಯಣಸ್ವಾಮಿ ಅವರಿಗೂ ನನಗೂ ಯಾವುದೇ ವೈಯುಕ್ತಿಕ ದ್ವೇಷ ಇಲ್ಲ. ನಾನು ಸಾಮಾಜಿಕ ಕಾರ್ಯಕರ್ತನಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವೇ ಹೊರತಾಗಿ ಬೇರೆ ಯಾವುದೇ ದುರುದ್ದೇಶವಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ರತ್ನಕುಮಾರ್, ಎಸ್.ಚಿನ್ನ, ಅಪ್ರೋಸ್ ಪಾಷ, ಎಂ.ವೇಣುಗೋಪಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.