ADVERTISEMENT

ಕೆಸರನಹಳ್ಳಿ ಗ್ರಾ.ಪಂ. ಸಾಮಾನ್ಯ ಸಭೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 7:02 IST
Last Updated 25 ಫೆಬ್ರುವರಿ 2026, 7:02 IST
ಬಂಗಾರಪೇಟೆ ತಾಲ್ಲೂಕಿನ ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರನ್ನು ಗೌರವಿಸಲಾಯಿತು
ಬಂಗಾರಪೇಟೆ ತಾಲ್ಲೂಕಿನ ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರನ್ನು ಗೌರವಿಸಲಾಯಿತು   

ಬಂಗಾರಪೇಟೆ: ತಾಲ್ಲೂಕಿನ ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಮಂಗಳವಾರ ಸಾಮಾನ್ಯ ಸಭೆ ನಡೆಯಿತು.

ಈ ವೇಳೆ ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ ಶಂಕರ್ ಮಾತನಾಡಿ, ‘ನನ್ನ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕೆಲಸವನ್ನು ಪಾರದರ್ಶಕವಾಗಿ ನಿರ್ವಹಿಸಲಾಗಿದೆ. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಸಿಸಿ ರಸ್ತೆ, ಒಳಚರಂಡಿ ಮತ್ತು ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಲಾಗಿದೆ. ಪಂಚಾಯಿತಿಗೆ ಬರುವ ವರಮಾನವನ್ನು ಯಾವುದೇ ಸೋರಿಕೆ ಇಲ್ಲದೆ ಸಮರ್ಪಕವಾಗಿ ವಸೂಲಿ ಮಾಡಿದ್ದು,  ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಬಳಸಲಾಗಿದೆ’ ಎಂದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿರಾಜು, ಆಡಳಿತಾಧಿಕಾರಿ ರವಿ, ಉಪಾಧ್ಯಕ್ಷ ಸತ್ಯ ಗೋವಿಂದರಾಜು, ಸದಸ್ಯರಾದ ಮಂಜುನಾಥ್, ಸುರೇಂದ್ರ, ಕಿರಣ್ ಸಿಂಗ್ ಹಾಗೂ ಪಂಚಾಯಿತಿಯ ಇತರೆ ಸಿಬ್ಬಂದಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.