ADVERTISEMENT

ಕೋಟಿಲಿಂಗೇಶ್ವರ ವಿವಾದ: ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2019, 10:48 IST
Last Updated 19 ಸೆಪ್ಟೆಂಬರ್ 2019, 10:48 IST

ಕೆಜಿಎಫ್: ಕಮ್ಮಸಂದ್ರದ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಬುಧವಾರ ತಾತ್ಕಾಲಿಕ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಮತ್ತು ಇಬ್ಬರು ಸಮರ್ಥ ವ್ಯಕ್ತಿಗಳ ಸಮಿತಿ ರಚನೆ ಮಾಡುವಂತೆ ಸೂಚಿಸಿದೆ. ದೇವಾಲಯದಲ್ಲಿ ಪೂಜಾ ಕಾರ್ಯಗಳು ಎಂದಿನಂತೆ ನಡೆಯಬೇಕು. ಪ್ರತಿ ತಿಂಗಳು 5ನೇ ತಾರೀಕಿನಂದು ಸಭೆ ನಡೆಸಿ, ನ್ಯಾಯಾಲಯಕ್ಕೆ ವರದಿ ನೀಡಬೇಕು. ದೇವಾಲಯದ ವಿಷಯದಲ್ಲಿ ಯಾರೂ ಮಧ್ಯಪ್ರವೇಶ ಮಾಡಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದು ವಕೀಲ ನಂಜುಂಡಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ದೇವಾಲಯ ಸಂಸ್ಥಾಪಕ ಧರ್ಮಾಧಿಕಾರಿ ಸಾಂಬಶಿವಮೂರ್ತಿ ಸ್ವಾಮಿ ನಿಧನರಾದ ನಂತರ ಹಿಂದಿನ ಕಾರ್ಯದರ್ಶಿ ಕೆ.ವಿ.ಕುಮಾರಿ ಮತ್ತು ಸ್ವಾಮಿ ಅವರ ಪುತ್ರ ಶಿವಪ್ರಸಾದ್ ನಡುವೆ ಧರ್ಮಾಧಿಕಾರಿ ಹುದ್ದೆಗಾಗಿ ಮತ್ತು ಆಡಳಿತ ನಡೆಸುವ ಸಂಬಂಧವಾಗಿ ವ್ಯಾಜ್ಯ ನಡೆದು, ನ್ಯಾಯಾಲಯದ ಮೆಟ್ಟಿಲು ತುಳಿಯುವಂತಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.