
ಕೆಜಿಎಫ್: ಜನದಟ್ಟಣೆ ಪ್ರದೇಶದಲ್ಲಿ ಬೈಕ್‌ನಲ್ಲಿ ವ್ಹೀಲೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಆ್ಯಂಡರ್‌ಸನ್‌ಪೇಟೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಆ್ಯಂಡರ್‌ಸನ್‌ಪೇಟೆಯ ವಾಸನ್ ವೃತ್ತದ ಬಳಿ ಮಧ್ಯಾಹ್ನ 12 ಗಂಟೆ ವೇಳೆ ಊರಿಗಾಂ ಬ್ಯಾಂಡ್ ಲೈನ್ ನಿವಾಸಿ ವಿಶಾಲ್ (19) ಮತ್ತು ಮಾರಿಕುಪ್ಪಂನ ಮಿಷನ್ ಬ್ಲಾಕ್ ನಿವಾಸಿ ಅಭಿಷೇಕ್ (24) ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿದ್ದರು. ಅಷ್ಟೇ ಅಲ್ಲದೆ, ವ್ಹೀಲೆ ಮಾಡಿದ್ದಾರೆ. ಈ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಪೊಲೀಸರಿಗೆ ಕಳುಹಿಸಿದ್ದರು.
ಬೀಟ್ ಪೊಲೀಸ್ ಸಿಬ್ಬಂದಿ ಅನಿಷ್ ಪಾಷಾ ಅವರು ಆರೋಪಿಗಳನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.
ಆರೋಪಿಗಳು ಬಳಸಿದ್ದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಆ್ಯಂಡರ್‌ಸನ್‌ಪೇಟೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.