ADVERTISEMENT

ಕೆಜಿಎಫ್‌ |ಸಾಮಾಜಿಕ ಜಾಲತಾಣಗಳಲ್ಲಿ ದೇಶ ವಿರೋಧಿ ಪೋಸ್ಟ್; ಬಾಲಕ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 18:31 IST
Last Updated 26 ಜುಲೈ 2025, 18:31 IST
<div class="paragraphs"><p>(ಪ್ರಾತಿನಿಧಿಕ ಚಿತ್ರ)</p></div>
   

(ಪ್ರಾತಿನಿಧಿಕ ಚಿತ್ರ)

ಕೆಜಿಎಫ್‌: ಸಾಮಾಜಿಕ ಜಾಲತಾಣಗಳಲ್ಲಿ ದೇಶ ವಿರೋಧಿ ಚಟುವಟಿಕೆಗೆ ಸಂಬಂಧಿಸಿದ ಪೋಸ್ಟ್‌ ಹಾಕಿದ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಬೇತಮಂಗಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಉಗ್ರಗಾಮಿ ಚಟುವಟಿಕೆಗಳಲ್ಲಿ ಆಸಕ್ತಿ ತೋರುವಂತಹ ಸಂದೇಶ, ವಿಡಿಯೊಗಳನ್ನುಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ ಬಾಲಕ ಪೋಸ್ಟ್‌ಗಳ ಮೇಲೆ ಗುಪ್ತಚರ ಇಲಾಖೆ ಕಣ್ಣಿಟ್ಟಿತ್ತು.

ADVERTISEMENT

ಬಾಲಕನನ್ನು ಪತ್ತೆ ಹಚ್ಚಿದ ಗುಪ್ತಚರ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು, ಸ್ಥಳೀಯ ಪೊಲೀಸರ ಜೊತೆಗೂಡಿ ತನಿಖೆ ಕೈಗೊಂಡಿದ್ದಾರೆ.

ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಬಾಲಕ ಮೂಲತಃ ಆಂಧ್ರಪ್ರದೇಶದವನಾಗಿದ್ದು ಬೆಂಗಳೂರಿನ ಮಾಂಸದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈಚೆಗೆ ತಾಲ್ಲೂಕಿನ ಬೇತಮಂಗಲ ಸಮೀಪದ ಮಾಂಸದ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬಾಲಕ ಜಾಲಾಡಿದ ವೆಬ್‌ಸೈಟ್‌ಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾವುದಾದರೂ ಸಂಘಟನೆಗಳು ಆತನನ್ನು ಉಗ್ರಗಾಮಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರಚೋದನೆ ನೀಡಿದ್ದವೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.