
ಬಂಧನ (ಸಾಂದರ್ಭಿಕ ಚಿತ್ರ)
ಕೆಜಿಎಫ್: ಹಾಡುಹಗಲೇ ಮನೆಯಲ್ಲಿ ಕಳ್ಳತನ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಮೂವರ ವಿರುದ್ಧ ಬೇತಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅ.27 ರಂದು ಬೇತಮಂಗಲ-ಕ್ಯಾಸಂಬಳ್ಳಿ ರಸ್ತೆಯಲ್ಲಿರುವ ಶ್ರೀನಗರ ಬಡಾವಣೆಯಲ್ಲಿ ಕೃಷ್ಣಮೂರ್ತಿ ಎಂಬುವರಿಗೆ ಸೇರಿದ ಮನೆಯಲ್ಲಿ ಬಾಲಕಿಯೊಬ್ಬಳು ಕಳ್ಳತನಕ್ಕೆ ಯತ್ನಿಸಿದ್ದಳು. ಮನೆಯ ಮಾಲೀಕರು ಸ್ನಾನಕ್ಕೆ ಹೋಗಿದ್ದಾಗ, ಬಾಲಕಿ ಈ ಕೃತ್ಯಕ್ಕೆ ಯತ್ನಿಸಿದ್ದಳು. ಸಮಯಪ್ರಜ್ಞೆ ಮೆರೆದ ಕೃಷ್ಣಮೂರ್ತಿ ಅವರು ಬಾಲಕಿಯನ್ನು ಹಿಡಿದು ಪೊಲೀಸರಿಗೆ ಹಸ್ತಾಂತರಿದ್ದರು. ಈ ಸಂದರ್ಭದಲ್ಲಿ ಬಾಲಕಿಯ ಜೊತೆಗೆ ಬಂದಿದ್ದ ಉಳಿದವರು ಓಡಿ ಹೋದರು.
ಮನೆಗಳ್ಳತನದ ಪ್ರಕರಣದ ಬಗ್ಗೆ ಸಬ್ ಇನ್‌ಸ್ಪೆಕ್ಟರ್ ಗುರುರಾಜ ಚಿಂತಾಕಲ ಅವರಿಗೆ ಮಾಹಿತಿ ನೀಡಿದ್ದರು. ಅವರು ಆರೋಪಿಯನ್ನು ಬಿಟ್ಟು ಕಳಿಸಿದ್ದರು. ಉಳಿದ ಆರೋಪಿಗಳನ್ನು ಸಬ್ ಇನ್‌ಸ್ಪೆಕ್ಟರ್ ಬಂಧಿಸಲಿಲ್ಲ ಎಂದು ಆರೋಪಿಸಿ ಕೃಷ್ಣಮೂರ್ತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರು.
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಅಪರಿಚಿತರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಸಬ್ ಇನ್‌ಸ್ಪೆಕ್ಟರ್ ಅವರ ನಿರ್ಲಕ್ಷ್ಯತೆ ಬಗ್ಗೆ ಕೂಡ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.