ADVERTISEMENT

ಕೋರಮಂಡಲ | ಬೆಂಕಿ ಅವಘಡ: ಮನೆಯ ವಸ್ತುಗಳು ಭಸ್ಮ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 6:42 IST
Last Updated 27 ಡಿಸೆಂಬರ್ 2025, 6:42 IST
<div class="paragraphs"><p>ಕೆಜಿಎಫ್‌ನ ಕೋರಮಂಡಲದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡ ಸ್ಥಳಕ್ಕೆ ಪೌರಾಯುಕ್ತ ಆಂಜನೇಯ ಭೇಟಿ ನೀಡಿ ಪರಿಶೀಲಿಸಿದರು</p></div>

ಕೆಜಿಎಫ್‌ನ ಕೋರಮಂಡಲದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡ ಸ್ಥಳಕ್ಕೆ ಪೌರಾಯುಕ್ತ ಆಂಜನೇಯ ಭೇಟಿ ನೀಡಿ ಪರಿಶೀಲಿಸಿದರು

   

ಕೆಜಿಎಫ್: ನಗರದ ಕೋರಮಂಡಲದ ಸೌತ್ ಟ್ಯಾಂಕ್ ಬ್ಲಾಕ್ ಬಡಾವಣೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ ಇಡೀ ಮನೆಯ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಶುಕ್ರವಾರ ನಡೆದಿದೆ.

ಶಿವಕುಮಾರ್ ಎಂಬುವರಿಗೆ ಸೇರಿದ ಮನೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ ಮನೆಯಲ್ಲಿದ್ದ ದಾಖಲೆಗಳು, ಬಟ್ಟೆ, ಚಾವಣಿ ಸೇರಿದಂತೆ ಎಲ್ಲವೂ ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲಕ್ಕೆ ಆಗಮಿಸಿ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರನ್ನು ಹೊರಗೆ ತಂದು ಹೆಚ್ಚುವರಿ ಅಪಾಯವನ್ನು ತಡೆಗಟ್ಟಿದರು.

ADVERTISEMENT

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ. ಬೆಂಕಿ ಆವರಿಸಿಕೊಂಡ ತಕ್ಷಣವೇ ಮನೆಯಲ್ಲಿದ್ದವರು ಹೊರಗೆ ಓಡಿ ಬಂದು ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ನಗರಸಭೆ ಆಯುಕ್ತ ಆಂಜನೇಯಲು ಭೇಟಿ ನೀಡಿ, ಮನೆ ಕಳೆದುಕೊಂಡವರ ಜೊತೆ ಮಾತನಾಡಿ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಮನೆಯಲ್ಲಿ ಸುಟ್ಟು ಭಸ್ಮವಾದ ವಸ್ತುಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.