ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ನಡೆದ ಶಾಂತಿ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮಾತನಾಡಿದರು. ಡಿವೈಎಸ್‌ಪಿ ಪಾಂಡುರಂಗ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು
ಕೆಜಿಎಫ್: ಮುಂಬರುವ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಪ್ರಯುಕ್ತ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರ ಶಾಂತಿ ಮತ್ತು ಸೌಹಾರ್ದತೆ ಸಭೆ ಆಯೋಜಿಸಲಾಯಿತು.
ಸಭೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ‘ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಶಾಂತಿಯಿಂದ ಹಬ್ಬ ಆಚರಿಸಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳುವ ಕ್ರಮಗಳಿಗೆ ಎಲ್ಲರೂ ಸಹಕಾರ ನೀಡಬೇಕು’ ಎಂದರು.
ಗಣೇಶೋತ್ಸವ ಆಚರಣೆಗೆ ಸಂಘಟನೆಗಳು ಪೊಲೀಸರಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸಂಬಂಧಿಸಿದ ಇತರ ಕಚೇರಿಗಳಿಂದಲೂ ಅನುಮತಿ ಹೊಂದಿರಬೇಕು ಎಂದರು.
ಡಿವೈಎಸ್‌ಪಿ ಪಾಂಡುರಂಗ ಹಬ್ಬದ ಬಗ್ಗೆ ಸಂಘಟನೆಗಳು ನಡೆದುಕೊಳ್ಳಬೇಕಾದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಸರ್ಕಲ್ ಇನ್‌ಸ್ಪೆಕ್ಟರ್‌ಗಳಾದ ನವೀನ್, ವೈ.ಆರ್.ರಂಗಸ್ವಾಮಯ್ಯ, ಮಾರ್ಕೊಂಡಯ್ಯ, ದಯಾನಂದ್, ಜಿ.ಸಿ.ನಾರಾಯಣಸ್ವಾಮಿ, ಲಕ್ಷ್ಮಿನಾರಾಯಣ, ಆರ್‌ಪಿಐ ಸೋಮಶೇಖರ್ ಸೇರಿದಂತೆ ಇಲಾಖೆಯ ವಿವಿಧ ದರ್ಜೆಯ ಅಧಿಕಾರಿಗಳು ಭಾಗವಹಿಸಿದ್ದರು. ಕೆಜಿಎಫ್ ಮತ್ತು ಬಂಗಾರಪೇಟೆ ತಾಲ್ಲೂಕಿನ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.