ಬೀದಿ ನಾಯಿಗಳ ಗುಂಪು
(ಪ್ರಾತಿನಿಧಿಕ ಚಿತ್ರ)
ಕೆಜಿಎಫ್: ನಗರದ ಊರಿಗಾಂ ಪೇಟೆ ಬಳಿಯ ಬಾಲಕೃಷ್ಣ ಬಡಾವಣೆಯಲ್ಲಿ ಭಾನುವಾರ ಸಂಜೆ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿವೆ.
ಮನೆಯ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ನಾಲ್ಕು ವರ್ಷದ ಬಾಲಕ ಅಲೆಕ್ಸ್ ಮೇಲೆ ಬೀದಿ ನಾಯಿಗಳು ಎರಗಿವೆ. ನಾಯಿಗಳಿಂದ ತಪ್ಪಿಸಿಕೊಳ್ಳಲು ಬಾಲಕ ಪ್ರಯತ್ನಿಸಿದ್ದು, ನಾಯಿಗಳು ಕಚ್ಚಿ ಎಳೆದಾಡಿವೆ. ಈ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದೆ.
ಬಾಲಕನ ತೊಡೆ ಹಾಗೂ ಕಾಲುಗಳ ಮೇಲೆ ಗಾಯಗಳಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಗಾಯಾಳು ಬಾಲಕನ ಪೋಷಕರು ಅಸ್ಸಾಂ ಮೂಲದವರಾಗಿದ್ದು, ನಗರದ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.