ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಆಶ್ರಯದಲ್ಲಿ ವಿಶ್ವವಿದ್ಯಾಲಯ ಮಟ್ಟದ ಬಾಲಕರ ಅಂತರ ಕಾಲೇಜು ಕೊಕ್ಕೊ ಟೂರ್ನಿ ಗುರುವಾರ ತಾಲ್ಲೂಕಿನ ಮಂಗಸಂದ್ರ ಸ್ನಾತಕೋತ್ತರ ಕೇಂದ್ರದಲ್ಲಿ ಆರಂಭವಾಯಿತು.
ಜಿಎಫ್‌ಜಿಸಿ ಚಿಕ್ಕಬಳ್ಳಾಪುರ, ಜಿಎಫ್‌ಜಿಸಿ ಗೌರಿಬಿದನೂರು, ಜಿಎಫ್‌ಜಿಸಿ ಬಂಗಾರಪೇಟೆ, ಜಿಎಫ್‌ಜಿಸಿ ಕೋಲಾರ ಈ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಲೀಗ್ ಹಾಗೂ ಕ್ವಾರ್ಟರ್ ಫೈನಲ್‌ನಲ್ಲಿ ಉತ್ತಮ ಪೈಪೋಟಿ ಮೂಡಿಬಂತು.
ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಈ ಟೂರ್ನಿ ಆಯೋಜಿಸಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ 25ಕ್ಕೂ ಹೆಚ್ಚು ಕಾಲೇಜು ತಂಡಗಳು ಪಾಲ್ಗೊಂಡಿದ್ದು, ಕುಲಪತಿ ಪ್ರೊ.ನಿರಂಜನ ವಾನಳ್ಳಿ ಚಾಲನೆ ನೀಡಿದರು. ದೈಹಿಕ ಶಿಕ್ಷಣ ನಿರ್ದೇಶಕ ಅಮರೇಶ್.ಕೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.