
ಪ್ರಜಾವಾಣಿ ವಾರ್ತೆ
ಬಂಧನ
(ಸಾಂದರ್ಭಿಕ ಚಿತ್ರ)
ಕೋಲಾರ: ತಾಲ್ಲೂಕಿನ ವಕ್ಕಲೇರಿ ಹೋಬಳಿ ಅರಾಭಿಕೊತ್ತನೂರು ಗ್ರಾಮದ ಕೆರೆ ಬಳಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಐವರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕೋಲಾರದ ಗಾಂಧಿನಗರದ ಅರ್ಜುನ್ (30), ಬೆಂಗಳೂರಿನ ರಾಮಮೂರ್ತಿನಗರದ ಕಿರಣ್ (31), ಕೋಲಾರದ ಕಾರಂಜಿಕಟ್ಟೆಯ ರಮೇಶ್ (36), ಮಂಜು ಹಾಗೂ ಶರತ್ ಬಂಧಿತರು. ಅವರಿಂದ ₹ 28,300 ನಗದು ವಶಪಡಿಸಿಕೊಂಡಿದ್ದಾರೆ.
ಇನ್‌ಸ್ಪೆಕ್ಟರ್ ಕಾಂತರಾಜ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಭಾರತಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು. ಎಸ್‌ಪಿ ನಿಖಿಲ್ ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.