ADVERTISEMENT

ಅತ್ಯಾಚಾರ: ಯುವಕನಿಗೆ 10 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 24 ಜನವರಿ 2025, 14:17 IST
Last Updated 24 ಜನವರಿ 2025, 14:17 IST
ರಘು
ರಘು   

ಕೋಲಾರ: 16ರ ಹರೆಯದ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ತಾಲ್ಲೂಕಿನ ಗ್ರಾಮವೊಂದರ ರಘು (23) ಎಂಬ ಯುವಕನಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. 

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದರ ಸಂಬಂಧ 2023ರ ಅಕ್ಟೋಬರ್‌ 8ರಂದು ನೀಡಿದ ದೂರಿನ ಮೇರೆಗೆ ಪೋಕ್ಸೊ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಕೋಲಾರ ಮಹಿಳಾ ಪೊಲೀಸರು, ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಬಿ.ಪ್ರಸಾದ್‌ ಅವರು ಶುಕ್ರವಾರ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ 10 ವರ್ಷ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿದ್ದಾರೆ. ಜೊತೆಗೆ ನೊಂದ ಬಾಲಕಿಗೆ ₹5 ಲಕ್ಷ ಪರಿಹಾರ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.