ADVERTISEMENT

ವೇಮಗಲ್-ಕುರಗಲ್: ಆ.17ಕ್ಕೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2025, 3:20 IST
Last Updated 12 ಜುಲೈ 2025, 3:20 IST
ವೇಮಗಲ್‍–ಕುರಗಲ್ ಪಟ್ಟಣ ಪಂಚಾಯಿತಿ ಕಚೇರಿ
ವೇಮಗಲ್‍–ಕುರಗಲ್ ಪಟ್ಟಣ ಪಂಚಾಯಿತಿ ಕಚೇರಿ   

ಕೋಲಾರ: ತಾಲ್ಲೂಕಿನ ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿಯ 17 ವಾರ್ಡ್‌ಗಳ 17 ಸ್ಥಾನಗಳಿಗೆ ಆ.17 ರಂದು ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಪಟ್ಟಣ ಪಂಚಾಯಿತಿ ರಚನೆ ನಂತರ ಮೊದಲ ಚುನಾವಣೆಯಾಗಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಜುಲೈ 29 ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಪ್ರಕಟಿಸುವುದರೊಂದಿಗೆ ಪ್ರಕ್ರಿಯೆಗಳಿಗೆ ಚಾಲನೆ ಸಿಗಲಿದೆ.

ADVERTISEMENT

ನಾಮಪತ್ರ ಸಲ್ಲಿಸಲು ಆ.5 ಕೊನೆ ದಿನಾಂಕವಾಗಿದ್ದು, ಆ.6 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಆ.8 ಕೊನೆ ದಿನವಾಗಿದೆ.

ಆ.17ರ ಭಾನುವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ತಾಲ್ಲೂಕು ಕೇಂದ್ರವಾದ ಕೋಲಾರದಲ್ಲಿ ಆ.20 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಚುನಾವಣಾ ನೀತಿ ಸಂಹಿತೆ ಜುಲೈ 29ರಂದು ಅಧಿಸೂಚನೆ ಪ್ರಕಟಗೊಂಡ ದಿನದಿಂದ ಮತ ಎಣಿಕೆವರೆಗೆ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ಜಾರಿಯಲ್ಲಿರಲಿದೆ. ಚುನಾವಣೆ ನಡೆಯುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.