ಕೋಲಾರ: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ -2025ರ ಅಗತ್ಯ, ಪರಿಣಾಮ ಮತ್ತು ಸಾರ್ವಜನಿಕರ ಪಾತ್ರ ಕುರಿತು ಸೆ.29ರಂದು ಬೆಳಿಗ್ಗೆ 10.30ಕ್ಕೆ ನಗರದ ಪತ್ರಕರ್ತರ ಭವನದಲ್ಲಿ ವಿಚಾರ ಗೋಷ್ಠಿ ಹಾಗೂ ಸಂವಾದ ಹಮ್ಮಿಕೊಳ್ಳಲಾಗಿದೆ ಎಂದು ಜೆಪಿ ವಿಚಾರ ವೇದಿಕೆಯ ಆರ್.ದಯಾನಂದ್ ತಿಳಿಸಿದ್ದಾರೆ.
ಜಾಗೃತ ಕರ್ನಾಟಕ, ಈದಿನ.ಕಾಂ ಹಾಗೂ ಲೋಕನಾಯಕ ಜೆ.ಪಿ. ವಿಚಾರ ವೇದಿಕೆ ಆಶ್ರಯದಲ್ಲಿ ನಡೆಯಲಿದೆ ಎಂದರು.
ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಅಧ್ಯಕ್ಷತೆಯಲ್ಲಿ, ವಿಚಾರವಾದಿ ಎ. ನಾರಾಯಣ ವಿಷಯ ಮಂಡನೆ ಮಾಡಲಿದ್ದಾರೆ. ಜಾಗೃತ ಕರ್ನಾಟಕದ ಎಚ್.ವಿ.ವಾಸು ಸಂವಾದ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ರಾಮರಾಜು, ಆದಿಮ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಎನ್.ಮುನಿಸ್ವಾಮಿ, ನೆಲ ಸಂಸ್ಕೃತಿ ಚಿಂತಕ ಹ.ಮಾ.ರಾಮಚಂದ್ರ, ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್, ಸಾಮಾಜಿಕ ಹೋರಾಟಗಾರ ಸಿ.ವಿ.ಗೋಪಾಲ್ ಮುಳಬಾಗಿಲು, ಮುಸ್ಲಿಂ ಸಮುದಾಯದ ಮುಖಂಡ ಸಲಾವುದ್ದೀನ್ ಬಾಬು, ಹಿಂದುಳಿದ ಸಮುದಾಯಗಳ ಮುಖಂಡ ಅಂಚೆ ಅಶ್ವತ್, ಅತಿ ಹಿಂದುಳಿದ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ನ್ಯಾಯವಾದಿ ದಿವಾಕರ್, ವಾರಧಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ರೆಡ್ಡಿ, ಉಪನ್ಯಾಸಕಿ ಕೆ.ವಿ.ನೇತ್ರಾವತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ರಮಾದೇವಿ ಚಲಪತಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.