ಕೋಲಾರ: ರಾಜ್ಯ ಚುನಾವಣಾ ಆಯೋಗದಿಂದ ಇನ್ನೂ ಮತದಾರರ ಪಟ್ಟಿ ಪರಿಷ್ಕರಣೆ ಪರಿಷ್ಕರಣೆ ಪ್ರಾರಂಭಿಸಿಲ್ಲ. ಬಿಹಾರದ ರೀತಿ ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದಾಗಲೇ ನೈಜ ಪರಿಸ್ಥಿತಿ ಏನೆಂದು ಗೊತ್ತಾಗುತ್ತದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿದ್ದಾರೆ.
ಬಿಹಾರ ಚುನಾವಣೆಗೆ ಸಂಬಂಧಿಸಿದಂತೆ ಕೇಳಿಬಂದಿರುವ ಮತ ಕಳ್ಳತನ ಆರೋಪ ರೀತಿ ರಾಜ್ಯದಲ್ಲೂ ನಡೆದಿರುವ ಸಾಧ್ಯತೆ ಇದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಗುರುವಾರ ನಗರದಲ್ಲಿ ಈ ರೀತಿ ಉತ್ತರಿಸಿದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರಿ ಆರೋಪ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ, ‘ರಾಹುಲ್ ಏನೆಂದು ಆರೋಪ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರ ಹೇಳಿಕೆ ಕುರಿತು ನಾನು ಪ್ರತಿಕ್ರಿಯಿಸುವುದಿಲ್ಲ’ ಎಂದರು.
‘ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಕೊಟ್ಟ ಬಳಿಕ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಶುರು ಮಾಡಿಕೊಳ್ಳುತ್ತೇವೆ’ ಎಂದು ತಿಳಿಸಿದರು.
‘ಮಾಲೂರು ವಿಧಾನಸಭೆ ಕ್ಷೇತ್ರದ ಮರು ಮತ ಎಣಿಕೆ ಕುರಿತು, ‘ಆ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಕೇಂದ್ರ ಚುನಾವಣಾ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ಬರುತ್ತದೆ. ನಮಗೆ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾತ್ರ ಸಂಬಂಧಪಟ್ಟಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.