ADVERTISEMENT

ಕೋಲಾರ: 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 3:07 IST
Last Updated 26 ಫೆಬ್ರುವರಿ 2026, 3:07 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಕೋಲಾರ: 33 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೋಲಾರ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ADVERTISEMENT

ಕೋಲಾರದ ದರ್ಗಾ ಶಾಹಿ ಮೊಹಲ್ಲಾ ವಾಸಿ ಜಮೀರ್ (54) ಬಂಧಿತ ಆರೋಪಿ. ಈತ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಗಲಭೆ ಮಾಡಿ ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸಿದ್ದ ಕೇಸಿನ ಆರೋಪಿಯಾಗಿದ್ದು, ಇದೀಗ ದಸ್ತಗಿರಿ ಮಾಡಿ  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಾ.9 ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. ಪೊಲೀಸ್ ಪದ್ಧತಿ ಹಾಗೂ ಆಧುನಿಕ ತಂತ್ರಜ್ಞಾನದಿಂದ ಆರೋಪಿಯನ್ನು ಬಂಧಿಸಲಾಗಿದೆ. ಹೆಡ್‌ಕಾನ್‌ಸ್ಟೆಬಲ್‌ ಶೇಖರ್, ಕಾನ್‌ಸ್ಟೇಬಲ್‌ ರಮೇಶ್ ಆರೋಪಿಯನ್ನು ಬಂಧಿಸಿದ್ದು, ಅಧಿಕಾರಿ, ಸಿಬ್ಬಂದಿ ಕಾರ್ಯಕ್ಕೆ ಎಸ್ಪಿ ಕನಿಕಾ ಸಿಕ್ರಿವಾಲ್ ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.