ADVERTISEMENT

ಕೋಲಾರ: ಅನಾರೋಗ್ಯದಿಂದ ಬಳಲುತ್ತಿದ್ದ ಆಟೊ ಚಾಲಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 4:55 IST
Last Updated 30 ಡಿಸೆಂಬರ್ 2025, 4:55 IST
   

ಕೋಲಾರ: ಅನಾರೋಗ್ಯದಿಂದ ಬಳಲುತ್ತಿದ್ದ ನಗರದ ಆಟೊ ಚಾಲಕರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಲಾರದ ಜಯನಗರ ಬಡಾವಣೆ ನಿವಾಸಿ ಚಂದ್ರಶೇಖರ್ (45) ಆತ್ಮಹತ್ಯೆಗೆ ಶರಣಾದ ಚಾಲಕ.

ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ಆಟೊ ಚಾಲಕರಾಗಿ ಕೆಲಸ ಮಾಡುತ್ತಿರುವ ಅವರು ಆಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ಆರೋಗ್ಯ ಕಾಪಾಡಿಕೊಳ್ಳಲು ಹಣಕಾಸಿನ ಕೊರತೆ ಎದುರಾಗಿದ್ದು, ಈಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.