ಕೋಲಾರ: ಶಿಕ್ಷಕರ ದಿನಾಚರಣೆ ಅಂಗವಾಗಿ 2025–26ನೇ ಸಾಲಿನಲ್ಲಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗಗಳಿಂದ ಒಟ್ಟು 18 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಪ್ರತಿ ವಿಭಾಗದಲ್ಲಿ ತಲಾ ಒಬ್ಬೊಬ್ಬರಂತೆ ಪ್ರತಿ ತಾಲ್ಲೂಕಿಗೆ ತಲಾ ಮೂವರಂತೆ ಒಟ್ಟು 18 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶುಕ್ರವಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರಲಿದೆ.
ಡಿಡಿಪಿಐ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಶಿಕ್ಷಕರ ವಿವಿಧ ಸಂಘಟನೆಗಳ ಮುಖಂಡರು ಸೇರಿ ಜಿಲ್ಲೆಯ ಆರು ತಾಲ್ಲೂಕುಗಳಿಂದ ಒಟ್ಟು 18 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಶಿಕ್ಷಕರ ಕಾರ್ಯ ಚಟುವಟಿಕೆಗಳು, ಶೈಕ್ಷಣಿಕ ಪ್ರಗತಿಗೆ ನೀಡಿರುವ ಕೊಡುಗೆ, ಶಾಲಾ ಪರಿಸರ ನಿರ್ಮಾಣ, ಶಾಲೆಯಲ್ಲಿ ಶಿಸ್ತು, ದಾನಿಗಳ ನೆರವಿನಿಂದ ಶಾಲೆ ಅಭಿವೃದ್ದಿಗೆ ಕೈಗೊಂಡ ಕ್ರಮಗಳು ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ಅವರ ಪ್ರಗತಿದಾಯಕ ಅಂಶ ಪರಿಶೀಲಿಸಿ ಈ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ಕೊತ್ತೂರು ಮಂಜುನಾಥ್, ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲಾಧಿಕಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿಗೆ ಭಾಜನರಾದ ಪ್ರೌಢಶಾಲಾ ಶಿಕ್ಷಕರು: ಬಂಗಾರಪೇಟೆ ತಾಲ್ಲೂಕಿನ ಹುಲಿಬೆಲೆ ಸರ್ಕಾರಿ ಪ್ರೌಢಶಾಲೆಯ ಭಾಗ್ಯಲಕ್ಷ್ಮಿ, ಕೆಜಿಎಫ್ ತಾಲ್ಲೂಕಿನ ಗೋಣಮಾಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಸಯಿದಾ ಬಿ., ಕೋಲಾರ ತಾಲ್ಲೂಕಿನ ಸೂಲೂರಿನ ಸರ್ಕಾರಿ ಪ್ರೌಢಶಾಲೆಯ ಟಿ.ಸುಮಾ, ಮಾಲೂರು ತಾಲ್ಲೂಕಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಆಂಜನಪ್ಪ, ಮುಳಬಾಗಿಲು ತಾಲ್ಲೂಕಿನ ಅಂಗೊಂಡಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆನಂದಪ್ಪ, ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಸರ್ಕಾರಿ ಪ್ರೌಢಶಾಲೆಯ ಎಂ.ಕೆ.ವೆಂಕಟರಮಣಪ್ಪ.
ಪ್ರಶಸ್ತಿಗೆ ಭಾಜನರಾದ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಬಂಗಾರಪೇಟೆ ತಾಲ್ಲೂಕಿನ ಗಾಜಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯಶೋಧಮ್ಮ, ಕೆಜಿಎಫ್ ತಾಲ್ಲೂಕಿನ ಪಾರಂಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಾಜ್ಯಶ್ರೀ ಎಚ್.ಕೆ., ಕೋಲಾರ ತಾಲ್ಲೂಕಿನ ಗದ್ದೆ ಕಣ್ಣೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸರೋಜಮ್ಮ, ಮಾಲೂರು ತಾಲ್ಲೂಕಿನ ಚಿಕ್ಕ ಇಗ್ಗಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಶೀಲಮ್ಮ, ಮುಳಬಾಗಿಲು ತಾಲ್ಲೂಕಿನ ಕುರುಬರಪೇಟೆ ಮೈನ್‌ನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಫೈಜುಲ್ಲಾ ಎಂ., ಶ್ರೀನಿವಾಸಪುರ ತಾಲ್ಲೂಕಿನ ಯಚ್ಚನಹಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಯಾಸ್ಮೀನ್ ಬೇಗಂ.
ಪ್ರಶಸ್ತಿಗೆ ಭಾಜನರಾದ ಕಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕರು: ಬಂಗಾರಪೇಟೆ ತಾಲ್ಲೂಕಿನ ಬಂಗಾರುನತ್ತದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಶಾಂತ್ ಎ.ಎಸ್., ಕೆಜಿಎಫ್ ತಾಲ್ಲೂಕಿನ ನತ್ತದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಂಗಪ್ಪ ಆರ್., ಕೋಲಾರ ತಾಲ್ಲೂಕಿನ ಸೀಗೆಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ದರ್ಮೇಶ್, ಮಾಲೂರು ತಾಲ್ಲೂಕಿನ ಮಾರಸಂದ್ರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಂಜುನಾಥ್ ಸಿ., ಮುಳಬಾಗಿಲು ತಾಲ್ಲೂಕಿನ ಗುಮ್ಲಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಲಕ್ಷ್ಮಿದೇವಮ್ಮ, ಶ್ರೀನಿವಾಸಪುರ ತಾಲ್ಲೂಕಿನ ತಂತಾರ್ಲಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶ್ರೀನಿವಾಸರೆಡ್ಡಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.