ಕೋಲಾರ: ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದ ವೇಳೆ ಕಿಡಿಗೇಡಿಗಳು ಬಸ್ಸಿನ ಮೇಲೆ ಕಲ್ಲೆಸೆದಿದ್ದಾರೆ.
ನಗರದ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಕಿಟಕಿ ಗಾಜು ಪುಡಿಪುಡಿಯಾಗಿದೆ.
ಬೆಳಿಗ್ಗೆಯಿಂದಲೇ ಕೋಲಾರದಲ್ಲಿ ಬಸ್ ನಿಲ್ದಾಣ ಸ್ತಬ್ದವಾಗಿತ್ತು. 10 ಗಂಟೆ ವೇಳೆಗೆ ಸಾರಿಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಜಿಲ್ಲಾ ಪೊಲೀಸರು ಸ್ಥಳಕ್ಕೆ ಬಂದು ಬಂದೋಬಸ್ತ್ ಕಲ್ಪಿಸಿದ್ದಾರೆ. ಖಾಸಗಿ ಬಸ್ಸುಗಳು ಕಾರ್ಯಾಚರಣೆ ನಡೆಸುತ್ತಿವೆ. ಆದಾಗ್ಯೂ ಶಾಲಾಕಾಲೇಜು ವಿದ್ಯಾರ್ಥಿಗಳು, ನೌಕರರು, ವ್ಯಾಪಾರಿಗಳು ಸರಿಯಾದ ಸಂಚಾರ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.