
ಪ್ರಜಾವಾಣಿ ವಾರ್ತೆಅಪಘಾತ, –ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ
ಕೋಲಾರ: ತಾಲ್ಲೂಕಿನ ಕೊಂಡರಾಜನಹಳ್ಳಿ ಗೇಟ್ ಬಳಿ ಶನಿವಾರ ಬೆಳಿಗ್ಗೆ ಬಸ್ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ ಹಿಂದೆ ಬರುತ್ತಿದ್ದ ಎರಡು ಕಾರುಗಳೂ ಪರಸ್ಪರ ಡಿಕ್ಕಿಯಾಗಿವೆ. ಅಪಘಾತದಿಂದ ವಾಹನಗಳಿಗೆ ಹಾನಿಯಾದರೂ ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸಂಚಾರ ಸುಗಮಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.