ADVERTISEMENT

ಕೋಲಾರ | ಕಾರು ಅಪಘಾತ; ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2024, 6:25 IST
Last Updated 28 ಸೆಪ್ಟೆಂಬರ್ 2024, 6:25 IST
<div class="paragraphs"><p>ಅಪಘಾತಕ್ಕೀಡಾದ ಕಾರು</p></div>

ಅಪಘಾತಕ್ಕೀಡಾದ ಕಾರು

   

ಕೋಲಾರ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ರಾಮಸಂದ್ರ ಗೇಟ್ ಬಳಿ ಶನಿವಾರ ಕಾರು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ನಾಗಮಂಗಲ ಗ್ರಾಮದ ವಿಶ್ವನಾಥ್ ಹಾಗೂ ಶಂಕರಪ್ಪ ಮೃತರು.

ADVERTISEMENT

ವೇಗವಾಗಿ ಬಂದ ಸ್ವಿಫ್ಟ್ ಡಿಸೈರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ‌.‌ ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.