
ಪ್ರಜಾವಾಣಿ ವಾರ್ತೆ.jpeg?w=900&q=70&auto=format,compress)
ಆರು ಅಪಘಾತ
ಕೋಲಾರ: ನಗರ ಹೊರ ವಲಯದಲ್ಲಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಹಾಸನದ ಹರ್ಷವರ್ಧನ್, ಬಳ್ಳಾರಿಯ ಬಸವರಾಜ್ ಹಾಗೂ ಬಂಗಾರಪೇಟೆಯ ಪ್ರಜ್ವಲ್ ಮೃತರು. ಕಾರಿನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಬಂಗಾರಪೇಟೆಯ ಸಾಯಿ ಗಗನ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಆಡಿ ಕಾರಿನಲ್ಲಿ ನಾಲ್ವರು ಬಂಗಾರಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಆರ್.ವಿ.ಕಾಲೇಜು ಬಳಿ ಈ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ.
ಮೃತರು ರೇವಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ.
ಅಪಘಾತ ನಡೆದ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.