ADVERTISEMENT

ಕೋಲಾರ| ಮೇಲ್ಸೇತುವೆಯಿಂದ ಬಿದ್ದ ಕಾರು: ಅಯ್ಯಪ್ಪ ಮಾಲಾಧಾರಿ ಸೇರಿ ನಾಲ್ವರು ಸಾವು

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 6:49 IST
Last Updated 24 ನವೆಂಬರ್ 2025, 6:49 IST
<div class="paragraphs"><p>ಅಪಘಾತದಿಂದ ನಜ್ಜುಗುಜ್ಜಾಗಿರುವ ಕಾರು</p></div>

ಅಪಘಾತದಿಂದ ನಜ್ಜುಗುಜ್ಜಾಗಿರುವ ಕಾರು

   

–ಪ್ರಜಾವಾಣಿ ಚಿತ್ರ

ಕೋಲಾರ: ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ ಬಳಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ಮಾಲಾಧಾರಿ ಸೇರಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ADVERTISEMENT

ಗೋಪಿ(38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತ ಯುವಕರು. ಮೃತರೆಲ್ಲರೂ ಚೆನ್ನೈ ಮೂಲದವರು.

ಅಪಘಾತದ ಬಳಿಕ ನಾಲ್ವರನ್ನು ಕೋಲಾರದ ಅರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ‌ಮೃತರಾದರು.

ತಮಿಳುನಾಡಿನಿಂದ ಬೆಂಗಳೂರಿನ ಕಡೆ ಬರುವಾಗ ಮೇಲ್ಸೇತುವೆಯಿಂದ ಕಾರು ಬಿದ್ದು ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಮಾಲೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.