
ಕೋಲಾರ ತಾಲ್ಲೂಕಿನ ವೇಮಗಲ್‌ನಲ್ಲಿ ನಡೆದ ಶತಮಾನೋತ್ಸವ ಶಾಲೆಯ ಸಾಂಸ್ಕೃತಿಕ ಸುಗ್ಗಿ ವೇಳೆ ಪಟ್ಟಣ ಪಂಚಾಯತಿಯ ಪೌರಕಾರ್ಮಿಕರು, ಬಿಸಿಯೂಟ ಅಡುಗೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು
ಕೋಲಾರ: ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ಪಟ್ಟಣದ ಹಿರಿಯರು, ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘದ ಸಹಕಾರದಲ್ಲಿ ಶಾಲಾ ಸಾಂಸ್ಕೃತಿಕ ಸುಗ್ಗಿ ಹಬ್ಬ ನಡೆಯಿತು.
ಪಟ್ಟಣ ಪಂಚಾಯತಿ ಅಧ್ಯಕ್ಷೆ ಅನುಷಾ ಮುನಿರಾಜು ಉದ್ಘಾಟಿಸಿದರು.
ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ‘111 ನೇ ವರ್ಷದಲ್ಲಿ ಸಾಗುತ್ತಿರುವ ಈ ಶಾಲೆಯಲ್ಲಿ ಓದಿರುವ ಎಷ್ಟೋ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ. ಶಿಕ್ಷಣ ಸಚಿವರು ಹಾಗೂ ಸ್ಥಳೀಯ ಶಾಸಕರ ಸಹಕಾರದೊಂದಿಗೆ ವೇಮಗಲ್ ಸರ್ಕಾರಿ ಶಾಲೆಯನ್ನು ಕೆಪಿಎಸ್ ಶಾಲೆಯನ್ನಾಗಿ ಮೇಲ್ದರ್ಜೆಗೆರಿಸಲಾಗಿದೆ. ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಜೊತೆಗೆ ಬೋಧಕೇತರ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುವುದು. ಯಾವುದೇ ಖಾಸಗಿ ಶಾಲೆಗಿಂತಲೂ ಕಡಿಮೆ ಇಲ್ಲ ಎನ್ನುವಂತ ಗುಣಮಟ್ಟದ ಶಿಕ್ಷಣವನ್ನು ಇಲ್ಲಿನ ಸರ್ಕಾರಿ ಶಾಲೆಯಲ್ಲಿ ನೀಡಲಾಗುತ್ತಿದೆ’ ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಿ.ಎಸ್.ವೆಂಕಟೇಶ್, ಮುಖ್ಯಾಧಿಕಾರಿ ವೆಂಕಟೇಶ್, ಎಸ್‌ಡಿಎಂಸಿ ಅಧ್ಯಕ್ಷ ಶಶಿಕುಮಾರ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರ ಕಲ್ವಮಂಜಲಿ ಶಿವಣ್ಣ ಮಾತನಾಡಿದರು.
ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್ ಶಾಲಾ ವರದಿ ಮಂಡಿಸಿದರು. ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಬಿ.ಆರ್‌ಪಿ ಮಲ್ಲಿಕಾರ್ಜುನಯ್ಯ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಕಲ್ವಮಂಜಲಿ ಸಿ ಶಿವಣ್ಣ, ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ, ಗ್ರಾಮ ಲೆಕ್ಕಾಧಿಕಾರಿ ವೆಂಕಟೇಶ್ (ವಿನಯ್), ಸೊಸೈಟಿ ನಿರ್ದೇಶಕ ರವಿಕುಮಾರ್, ಪ್ರಬಾರಿ ಮುಖ್ಯ ಶಿಕ್ಷಕಿ ಪ್ರಮೀಳಮ್ಮ, ದೈಹಿಕ ಶಿಕ್ಷಕ ವೆಂಕಟೇಶ್, ಪ.ಪಂ ಸದಸ್ಯರಾದ ದೀಪಾ ವಿನಯ್, ವಿ.ಎಂ.ನಾಗೇಶ್, ಸುಜಾತ, ಲೋಕೇಶ್ ಮರಿಯಪ್ಪ, ಅಂಜಲಿ, ರಾಮು, ರವಿಚಂದ್ರ, ಶಿಲ್ಪಾ, ನಟರಾಜ್ ಆಶ್ರಯ ಸಮಿತಿ ಸದಸ್ಯರಾದ ಪೇರ್ಜೆನಹಳ್ಳಿ ನಾಗೇಶ್, ವಿ.ಎಂ.ಮಂಜುನಾಥ್, ಬೆಟ್ಟಹೊಸಪುರ ಜಗನ್ನಾಥ್, ಅಮ್ರಿನ್ ಬಾನು, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.