ADVERTISEMENT

ಕೋಲಾರ | ಬಾಲ್ಯವಿವಾಹ ನಿಷೇಧ: ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 6:34 IST
Last Updated 7 ಜುಲೈ 2025, 6:34 IST
.
.   

ಕೋಲಾರ: ಗ್ರಾಮ ಮಟ್ಟದ ಬಾಲ್ಯವಿವಾಹ ನಿಷೇಧ ಅಧಿಕಾರಿಗಳಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಕ್ಸೊ ಕಾಯ್ದೆ-2012ರ ಒಳನೋಟಗಳು, ಅನುಷ್ಠಾನ, ಕಳ್ಳ ಸಾಗಣೆ ಮತ್ತು ವಾಣಿಜ್ಯಕ ಲೈಂಗಿಕ ಶೋಷಣೆ ಕುರಿತು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ಮಕ್ಕಳ ರಕ್ಷಣಾ ನಿರ್ದೇಶನಾಲಯ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಶ್ರಯದಲ್ಲಿ ಗ್ರಾಮ ಮಟ್ಟದ ಬಾಲ್ಯವಿವಾಹ ನಿಷೇಧ ಅಧಿಕಾರಿಗಳಾದ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಮುಳಬಾಗಿಲು ಮೇಲ್ವಿಚಾರಕಿ, ಮಕ್ಕಳ ಸಹಾಯವಾಣಿಯ ಕ್ಷೇತ್ರ ಕಾರ್ಯಕರ್ತರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮಕ್ಕಳು ಮತ್ತು ಜಿಲ್ಲಾ ಮಕ್ಕಳಾ ರಕ್ಷಣಾ ಘಟಕದ ಸಿಬ್ಬಂದಿ ಇದ್ದರು.

‌ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜಿ.ಎ.ಮಂಜುನಾಥ್, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು, ವಿಶೇಷ ಶೀಘ್ರಗತಿ ನ್ಯಾಯಾಲಯ-1 (ಪೋಕ್ಸೋ) ಪ್ರಸಾದ್ ಕೆ.ಬಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್‌.ನಟೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ, ತಹಶೀಲ್ದಾರ್‌ ಡಾ.ನಯನಾ, ಸಾರ್ವಜನಿಕ ಅಭಿಯೋಜಕ ಮಾಧವ ಪದ್ಮನಾಭ ಗಾಂವ್ಕರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.