ADVERTISEMENT

ಕೋಲಾರ ನಗರಸಭೆ ಅತಂತ್ರ: ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2019, 6:38 IST
Last Updated 14 ನವೆಂಬರ್ 2019, 6:38 IST
   

ಕೋಲಾರ: ಕೋಲಾರ ನಗರಸಭೆಯ 35 ವಾರ್ಡ್ ಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಯಾವುದೇ ಪಕ್ಷಕ್ಕೆ ನಿಚ್ಚಳ ಬಹುಮತ ಸಿಕ್ಕಿಲ್ಲ. 12 ವಾರ್ಡ್‌ಗಳಲ್ಲಿ ಕಾಂಗ್ರೆಸ್, 8 ವಾರ್ಡ್‌ಗಳಲ್ಲಿ ಜೆಡಿಎಸ್, 12 ವಾರ್ಡ್‌ಗಳಲ್ಲಿ ಪಕ್ಷೇತರರು ಹಾಗೂ 3 ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ನಗರಸಭೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು 18 ಸದಸ್ಯ ಬಲ ಬೇಕಿದ್ದು, ಫಲಿತಾಂಶ ಅತಂತ್ರವಾಗಿದೆ. ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಮೈತ್ರಿ ಚಟುವಟಿಕೆ ಗರಿಗೆದರಿದೆ. ಹೆಚ್ಚು ಸ್ಥಾನ ಗಳಿಸಿರುವ ಕಾಂಗ್ರೆಸ್ ಪಕ್ಷೇತರ ಅಭ್ಯರ್ಥಿಗಳನ್ನು ಸೆಳೆಯಲು‌ ಕಸರತ್ತು ಆರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT