ADVERTISEMENT

ಬೇಡಿಕೆಗಳಿಗೆ ಒತ್ತಾಯಿಸಿ ಪೌರಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 7:27 IST
Last Updated 4 ಜೂನ್ 2025, 7:27 IST

ಕೋಲಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೋಲಾರ ನಗರಸಭೆಯ ಪೌರಕಾರ್ಮಿಕರು ಕೆಲಸಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.

ನಗರಸಭೆ ಎದುರು ಸ್ವಚ್ಛತಾ ವಾಹನ ನಿಲ್ಲಿಸಿ ಯಾವುದೇ ಕೆಲಸ ಮಾಡದೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸವಲತ್ತುಗಳು ಪೌರ ಕಾರ್ಮಿಕರಿಗೆ ಸಿಗಬೇಕು. ಪೌರಸೇವಾ ನೌಕರರಿಗೆ ಜ್ಯೋತಿ ಸಂಜೀವಿನಿ ಯೋಜನೆ, ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ರಾಜ್ಯದಾದ್ಯಂತ ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಪೌರಕಾರ್ಮಿಕರು, ನಗರಸಭೆ ನೌಕರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.