ಕೋಲಾರ: ನಗರದ ಮಹಿಳಾ ಸರ್ಕಾರಿ ಕಾಲೇಜಿನ ಆವರಣದಲ್ಲಿ ಹೋಂಡಾ ಕಂಪನಿಯ ಸಿಎಸ್‍ಆರ್ ನಿಧಿಯಡಿ ಸುಮಾರು ₹ 1.25 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಕೆಲ ವರ್ಷಗಳ ಹಿಂದೆ ನಿರ್ಮಿಸಿದ್ದ ಸುಸಜ್ಜಿತ ಸಭಾಂಗಣವನ್ನು ಕೆಡವುತ್ತಿರುವುದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಳೆ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಿಸುವ ಸರ್ಕಾರದ ಯೋಜನೆ ಶ್ಲಾಘನೀಯವಾದರೂ ಸುಂದರ ಸಭಾಂಗಣ ಕೆಡವುತ್ತಿರುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇರುವ ಅತಿ ದೊಡ್ಡ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಈಗಾಗಲೇ ಮೂಲಸೌಲಭ್ಯಗಳ ಕೊರತೆ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸಭಾಂಗಣ ಕೆಡವುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿವೇಚನಾ ರಹಿತ ಕಾರ್ಯ ಎಂದು ಕೆಲ ಹಳೆ ವಿದ್ಯಾರ್ಥಿನಿಯರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಶಾಸಕರು ಹಾಗೂ ಜಿಲ್ಲಾಧಿಕಾರಿ ಈ ಸಂಬಂಧ ಗಮನಹರಿಸಿ ಸಭಾಂಗಣ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.