ಕೋಲಾರ: ‘ಮುಂದೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಅಧಿಕಾರ ಹಿಡಿಯಲಿವೆ’ ಎಂದು ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಹೇಳಿದರು.
ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಚನ್ನಪ್ಪನಹಳ್ಳಿ, ಪುರಹಳ್ಳಿ, ವೇಮಗಲ್ ಬೆಟ್ಟ ಹೊಸಪುರ ಮತ್ತು ಕಲ್ವ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ ಜೆಡಿಎಸ್, ಬಿಜೆಪಿ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಅವರು ಮಾತನಾಡಿದರು.
‘ನಾನು ಎರಡು ಬಾರಿ ಶಾಸಕನಾಗಿದ್ದಾಗ ಅಭಿವೃದ್ಧಿ ಆಗಿದ್ದ ಕೆಲಸಗಳನ್ನು ಬಿಟ್ಟರೆ ಮತ್ತೆ ಯಾವುದೇ ಅಭಿವೃದ್ಧಿ ಕ್ಷೇತ್ರದಲ್ಲಿ ನಡೆದಿಲ್ಲ. ವೇಮಗಲ್‍ಗೆ ಇದೇ ಮೊದಲ ಬಾರಿಗೆ ಪಟ್ಟಣ ಪಂಚಾಯಿತಿ ಚುನಾವಣೆ ನಡೆಯುತ್ತಿದ್ದು, ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಪಟ್ಟಣ ಪಂಚಾಯಿತಿಯಲ್ಲಿ ನಾವೇ ಅಧಿಕಾರದಲ್ಲಿ ಇರುತ್ತೇವೆ. ಕೆಲಸಗಳನ್ನು ಸಾರ್ವಜನಿಕರಿಗೆ ಮಾಡಿಕೊಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮುಖಂಡರು ಕಾಂಗ್ರೆಸ್ ಪಕ್ಷದತ್ತ ಹೋಗಬಾರದು’ ಎಂದರು.
ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ‘ವೇಮಗಲ್ ಪಟ್ಟಣ ಪಂಚಾಯಿತಿಯಲ್ಲಿ ಮೈತ್ರಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಈಗಾಗಲೇ ಗೊತ್ತಾಗಿದೆ. ಹೀಗಾಗಿ, ನಮ್ಮ ಪಕ್ಷದ ಮುಖಂಡರನ್ನು ಸೆಳೆಯಲು ಕಾಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷದ ಆಸೆ ಆಮಿಷಗಳಿಗೆ ಒಳಗಾಗದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ, ಜಿ.ಪಂ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಬೆಗ್ಲಿ ಸೂರ್ಯ ಪ್ರಕಾಶ್, ಬಂಕ್ ಮಂಜುನಾಥ್, ಅರುಣ್ ಪ್ರಸಾದ್, ಸೂಲೂರು ಆಂಜನಪ್ಪ, ಬಣಕನಹಳ್ಳಿ ನಟರಾಜ್, ಡಾ.ರಮೇಶ್, ಕಡಗಟ್ಟೂರು ವಿಜಯ್ ಕುಮಾರ್, ಸಿ.ಡಿ.ರಾಮಚಂದ್ರಗೌಡ, ತಂಬಳ್ಳಿ ಮುನಿಯಪ್ಪ, ಪುರಹಳ್ಳಿ ಶ್ರೀನಿವಾಸ್, ನವೀನ್ ಕುಮಾರ್, ದಿಲೀಪ್, ಕಿಶೋರ್, ವೇಮಗಲ್ ಸತೀಶ್, ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.