ADVERTISEMENT

ಕೋಲಾರ: ₹ 4.35 ಕೋಟಿ ಮೌಲ್ಯದ ವಸ್ತುಗಳ ಜಪ್ತಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 15:53 IST
Last Updated 25 ನವೆಂಬರ್ 2021, 15:53 IST
ಪೊಲೀಸರು ವಿವಿಧ ಅಪರಾಧ ಪ್ರಕರಣ ಭೇದಿಸಿ ವಶಪಡಿಸಿಕೊಂಡ ವಸ್ತುಗಳನ್ನು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್‌ ಕೋಲಾರದಲ್ಲಿ ಗುರುವಾರ ವಾರಸುದಾರರಿಗೆ ಹಸ್ತಾಂತರಿಸಿದರು
ಪೊಲೀಸರು ವಿವಿಧ ಅಪರಾಧ ಪ್ರಕರಣ ಭೇದಿಸಿ ವಶಪಡಿಸಿಕೊಂಡ ವಸ್ತುಗಳನ್ನು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್‌ ಕೋಲಾರದಲ್ಲಿ ಗುರುವಾರ ವಾರಸುದಾರರಿಗೆ ಹಸ್ತಾಂತರಿಸಿದರು   

ಕೋಲಾರ: ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಿರುವ ಜಿಲ್ಲೆಯ ಪೊಲೀಸರು ಸುಮಾರು ₹ 4.35 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕೋಲಾರದ ವಿವಿಧ ಠಾಣೆಗಳ ಪೊಲೀಸರು ₹ 31.69 ಲಕ್ಷ ಮೌಲ್ಯದ 76 ಬೈಕ್‌, ₹ 24.53 ಲಕ್ಷ ಬೆಲೆ ಬಾಳುವ ಕಾರು, ₹ 36.67 ಲಕ್ಷ ಮೌಲ್ಯದ ಚಿನ್ನಾಭರಣ, ₹ 2.16 ಲಕ್ಷ ಬೆಲೆ ಬಾಳುವ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ₹ 15.11 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

ಕೆಜಿಎಫ್‌ ಪೊಲೀಸ್‌ ಜಿಲ್ಲಾ ಸಿಬ್ಬಂದಿಯು ₹ 21 ಲಕ್ಷ ಬೆಲೆ ಬಾಳವು 45 ಬೈಕ್‌, ₹ 3 ಲಕ್ಷ ಬೆಲೆ ಬಾಳುವ ಕಾರು, ₹ 37.38 ಲಕ್ಷ ಮೌಲ್ಯದ ಆಭರಣಗಳು, ₹ 10 ಲಕ್ಷ ಬೆಲೆ ಬಾಳುವ ರಕ್ತಚಂದನ ಮರಗಳನ್ನು ವಶಪಡಿಸಿಕೊಂಡಿದ್ದಾರೆ. ಕೇಂದ್ರ ವಲಯ ಐಜಿಪಿ ಚಂದ್ರಶೇಖರ್‌ ಅವರು ಪೊಲೀಸರು ವಶಪಡಿಸಿಕೊಂಡ ಹಣ, ಆಭರಣ ಹಾಗೂ ವಾಹನಗಳನ್ನು ಗುರುವಾರ ವಾರಸುದಾರರಿಗೆ ಹಸ್ತಾಂತರಿಸಿದರು.

ADVERTISEMENT

ಗಾಂಜಾ ಮಾರಾಟ: ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ತಾಲ್ಲೂಕಿನ ವೇಮಗಲ್‌ ಪೊಲೀಸರು ₹ 5 ಲಕ್ಷ ಮೌಲ್ಯದ 20 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ತಮಿಳುನಾಡು ಮೂಲದ ಮಾರೀಶ್ವರನ್ ಮತ್ತು ಶ್ಯಾಮ್ ಬಂಧಿತರು. ಆರೋಪಿಗಳು ಆಂಧ್ರಪ್ರದೇಶ ಮತ್ತು ತಮಿಳುನಾಡಿನಿಂದ ಗಾಂಜಾ ತಂದು ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶ ಹಾಗೂ ಜೋಡಿಕೃಷ್ಣಾಪುರದ ಬಳಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.