ADVERTISEMENT

ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಕಾರು ಡಿಕ್ಕಿ; ದ್ವಿಚಕ್ರ ವಾಹನ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 8:35 IST
Last Updated 17 ಆಗಸ್ಟ್ 2022, 8:35 IST
   

ಶ್ರೀನಿವಾಸಪುರ (ಕೋಲಾರ ಜಿಲ್ಲೆ): ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಅವರಿದ್ದ ಕಾರು ಶ್ರೀನಿವಾಸಪುರ-ಚಿಂತಾಮಣಿ ಮುಖ್ಯರಸ್ತೆಯ ಪಾತಪಲ್ಲಿ ಗ್ರಾಮದ ಬಳಿ ಬುಧವಾರ ಡಿಕ್ಕಿಯಾಗಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತರಾದರು.

ಪಾತಪಲ್ಲಿ ಗ್ರಾಮದ ರಾಜಣ್ಣ (50) ಮೃತ ವ್ಯಕ್ತಿ.

'ಅಪಘಾತಕ್ಕೆ ಬಿಜೆಪಿ ಜಿಲ್ಲಾ ಅಧ್ಯಕ್ಷರಿದ್ದ ಕಾರು ಅತಿವೇಗವಾಗಿ ತೆರಳುತ್ತಿದ್ದದ್ದೇ ಕಾರಣ' ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿದ್ದು,‌ ಮೃತದೇಹವನ್ನು ಶ್ರೀನಿವಾಸಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ‌ ಚರಣ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.