ADVERTISEMENT

ಕೋಲಾರ | ಜಿಲ್ಲಾ ಕಾಂಗ್ರೆಸ್‌ಗೆ ಹೊಸ ಕಾರ್ಯಾಧ್ಯಕ್ಷರ ನೇಮಕ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 7:33 IST
Last Updated 27 ಫೆಬ್ರುವರಿ 2026, 7:33 IST
ನಾರಾಯಣಸ್ವಾಮಿ
ನಾರಾಯಣಸ್ವಾಮಿ   

ಕೋಲಾರ: ಕೋಲಾರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಾಧ್ಯಕ್ಷರನ್ನಾಗಿ ಮ್ಯಾಕಲ ನಾರಾಯಣಸ್ವಾಮಿ ಅವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. 

ಸಚಿವ ಕೆ.ಎಚ್‌.ಮುನಿಯಪ್ಪ ಬೆಂಬಲಿಗ ಊರುಬಾಗಿಲು ಶ್ರೀನಿವಾಸ್‌ ಕೂಡ ಜಿಲ್ಲಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷರಾಗಿದ್ದು, ಈಗ ಮತ್ತೊಬ್ಬರನ್ನು ನೇಮಿಸಿರುವುದು ಕಾಂಗ್ರೆಸ್‌ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರೂ ಆಗಿರುವ ಶ್ರೀನಿವಾಸಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ನಾರಾಯಣಸ್ವಾಮಿ, ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್‌ ಕುಮಾರ್‌ ಅವರ ಆಪ್ತ. 

ADVERTISEMENT

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪದಾಧಿಕಾರಿಗಳು ನೇಮಕಾತಿ ಆದೇಶ ಪತ್ರ ನೀಡಿದರು. ಈ ಸಂದರ್ಭದಲ್ಲಿ ರಮೇಶ್‌ ಕುಮಾರ್‌ ಬೆಂಬಲಿಗರು ಸಂಭ್ರಮಿಸಿದರು. 

‘ನೇಮಕ ಪ್ರಕ್ರಿಯೆ ನನ್ನ ಗಮನಕ್ಕೆ ಬಂದಿಲ್ಲ. ಆದರೆ, ಸಾಮಾಜಿಕ ಜಾಲತಾಣದಿಂದ ತಿಳಿದು ಅವರಿಗೆ ಶುಭಾಶಯ ಕೋರಿದ್ದೇನೆ. ಕಾಂಗ್ರೆಸ್‌ ಬಲಪಡಿಸಲು ಜೊತೆಯಲ್ಲಿ ಕೆಲಸ ಮಾಡೋಣ ಎಂದು ಸಹಕಾರ ಕೋರಿದ್ದೇನೆ’ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.