
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ದೊಡ್ಡಕಾರಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ವರ್ಷಗಳೇ ಕಳೆದಿದೆ. ಆದಾಗ್ಯೂ, ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಶುದ್ಧ ಕುಡಿಯುವ ನೀರಿನ ಘಟಕದ ದುರಸ್ತಿಗೆ ಮುಂದಾಗಿಲ್ಲ.
ಕೆಜಿಎಫ್ ತಾಲ್ಲೂಕಿನ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕಾರಿ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲಾಗಿತ್ತು. ಆದರೆ, ಅದು ಈಗ ಕೆಟ್ಟು ನಿಂತಿದೆ. ಇದರಿಂದಾಗಿ ಗ್ರಾಮದ ಜನರು ಪ್ರತಿನಿತ್ಯವು ಖಾಸಗಿ ವ್ಯಕ್ತಿಗಳ ಬಳಿ ₹10ರಿಂದ ₹20 ವೆಚ್ಚ ಮಾಡಿ ಕುಡಿಯುವ ನೀರು ಖರೀದಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ.
ದೊಡ್ಡಕಾರಿ ಗ್ರಾಮದಲ್ಲಿ ಹೋಬಳಿ ಮಟ್ಟದಿಂದ ರಾಜ್ಯಮಟ್ಟದವರೆಗೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಪ್ರಭಾವಿಗಳು ವಾಸಿಸುತ್ತಿದ್ದಾರೆ. ಆದರೆ, ಶುದ್ಧ ಕುಡಿಯುವ ನೀರಿನ ಘಟಕದ ದುರಸ್ತಿಗೆ ಮಾತ್ರ ಯಾರೂ ಮುಂದಾಗಿಲ್ಲ.
ನಮ್ಮ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿರುವ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಶಾಸಕರ ಗಮನಕ್ಕೆ ತರಲಾಗಿದೆ. ಅದರೆ, ಏನೂ ಪ್ರಯೋಜನವಾಗಿಲ್ಲ. ಗ್ರಾಮಸ್ಥರು ಪ್ರತಿ ನಿತ್ಯ ಖಾಸಗಿ ವ್ಯಕ್ತಿಗಳಿಂದ ನೀರು ಖರೀದಿ ಮಾಡಿ ಕುಡಿಯುತ್ತಿದ್ದಾರೆ.
ವಿಶ್ವನಾಥ್, ದೊಡ್ಡಕಾರಿ ಗ್ರಾಮಸ್ಥ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.