ಡಾ.ಜಿ.ಪರಮೇಶ್ವರ
ಕೋಲಾರ: ‘ಗೋಧ್ರಾ ರೀತಿಯ ಮತ್ತೊಂದು ದುರಂತ ಸಂಭವಿಸಲಿದೆ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹಂಚಿಕೊಂಡಿರುವ ವಿಷಯದ ಬಗ್ಗೆ ನನಗೆ ಮಾಹಿತಿಯಿಲ್ಲ. ಇಲಾಖೆಯ ಗಮನಕ್ಕೂ ಆ ವಿಚಾರ ಬಂದಿಲ್ಲ. ಹರಿಪ್ರಸಾದ್ ಅವರಿಗೆ ಗೊತ್ತಿರಬಹುದೇನೋ?’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ಅಯೋಧ್ಯೆ ವಿಚಾರವಾಗಿ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಗೋಧ್ರಾ ರೀತಿಯ ಮತ್ತೊಂದು ದುರಂತ ಸಂಭವಿಸಲಿದೆ ಎಂಬ ಹರಿಪ್ರಸಾದ್ ಹೇಳಿಕೆ ಕುರಿತು ನಗರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
‘ಹರಿಪ್ರಸಾದ್ ಯಾವ ಮಾಹಿತಿ ಆಧರಿಸಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಇದು ವೈಯಕ್ತಿಕ ಹೇಳಿಕೆ ಎಂದು ಅವರೇ ಹೇಳಿಕೊಂಡಿರುವಾಗ ಮತ್ತೆ ಇನ್ನೇನಿದೆ? ಸರ್ಕಾರಕ್ಕೆ ಯಾರೇ ಆಗಲಿ ಒಳ್ಳೆಯ ಸಲಹೆ ನೀಡಿದರೆ ಪಡೆದು ಸ್ವೀಕಾರ ಮಾಡಿ ಅಗತ್ಯ ಕ್ರಮಕೈಗೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.