
ಶ್ರೀನಿವಾಸಪುರ: ತಾಲ್ಲೂಕಿನ ಬೈಯಪ್ಪಲ್ಲಿ ಗ್ರಾಮದಲ್ಲಿ ಶುಕ್ರವಾರ ಗಂಗಮ್ಮ ಹಾಗೂ ಪುಲೇಕಮ್ಮ ದೇವಾಲಯದ 5ನೇ ವಾರ್ಷಿಕೋತ್ಸವ ಏರ್ಪಡಿಸಲಾಗಿತ್ತು. ವಾರ್ಷಿಕೋತ್ಸವದ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವಾಲಯದ ಆವರಣದಲ್ಲಿ ನವಗ್ರಹ ಹೋಮ ಹಾಗೂ ದೇವತಾ ವಿಗ್ರಹಗಳಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ದೇವಾಲಯಕ್ಕೆ ವಿದ್ಯುದ್ದೀಪ ಅಲಂಕಾರ ಮಾಡಲಾಗಿತ್ತು. ಧಾರ್ಮಿಕ ಕಾರ್ಯಗಳನ್ನು ದೇವಾಲಯದ ಪ್ರಧಾನ ಅರ್ಚಕ ಎಚ್.ಎನ್.ರಾಜಶೇಖರ್ ನೆರವೇರಿಸಿದರು. ಗ್ರಾಮದಲ್ಲಿ ದೇವತಾ ವಿಗ್ರಹಗಳ ಮೆರವಣಿಗೆ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ದೇವಾಲಯದ ಸೇವಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಹಾಗೂ ವಿವಿಧ ಗ್ರಾಮಗಳ ನಾಗರಿಕರು ಭಾಗವಹಿಸಿದ್ದರು. ಗ್ರಾಮದಲ್ಲಿ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.