ಕೆಜಿಎಫ್: ರಾಬರ್ಟಸನ್ ಪೇಟೆ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಗುರುವಾರ ಬಂಧಿಸಿ ಎಂಟು ಕೆ.ಜಿ ಗಾಂಜಾ ವಶಪಡಿಸಿಕೊಂಡರು.
ಮಂಗಳೂರು ಮೂಲದ ಮಹಮದ್ ಆಶ್ರಫ್ ಟಾಟಾ ಪಿಕಪ್ ವಾಹನದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಬ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಆರೋಪಿ ಕೃತ್ಯಕ್ಕೆ ಬಳಸಿದ ವಾಹನ ಕೂಡ ಜಪ್ತಿ ಮಾಡಲಾಗಿದೆ.
ಕಾರ್ಯಾಚರಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ನವೀನ್, ಸಿಬ್ಬಂದಿ ಗೋಪಿನಾಥ್, ಗೋಪಾಲಕೃಷ್ಣ, ರಾಮಾಂಜನೇಯಪ್ಪ, ರಘು, ಮುರಳಿ, ವಿನೋದ್ ಕುಮಾರ್, ಗಜೇಂದ್ರ, ಬಸವರಾಜ ಕಾಂಬ್ಳೆ ಮತ್ತು ಜೆ.ಸತ್ಯಪ್ರಕಾಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.