ADVERTISEMENT

ಐದು ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತರ ಆಯ್ಕೆ 

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2023, 13:04 IST
Last Updated 9 ಆಗಸ್ಟ್ 2023, 13:04 IST
ಬಂಗಾರಪೇಟೆ ತಾಲ್ಲೂಕಿನ ಆಲಂಬಾಡಿ ಜ್ಯೋತೇನಹಳ್ಳಿ ಪಂಚಾಯಿತಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ನಾರಾಯಣಮ್ಮ, ಉಪಾಧ್ಯಕ್ಷರಾಗಿ ರಾಮು ಆಯ್ಕೆಯಾದರು
ಬಂಗಾರಪೇಟೆ ತಾಲ್ಲೂಕಿನ ಆಲಂಬಾಡಿ ಜ್ಯೋತೇನಹಳ್ಳಿ ಪಂಚಾಯಿತಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ನಾರಾಯಣಮ್ಮ, ಉಪಾಧ್ಯಕ್ಷರಾಗಿ ರಾಮು ಆಯ್ಕೆಯಾದರು   

ಬಂಗಾರಪೇಟೆ: ತಾಲ್ಲೂಕಿನಲ್ಲಿ ಮಂಗಳವಾರ ಆರು ಪಂಚಾಯಿತಿಗೆ ನಡೆದ ಎರಡನೇ ಅವಧಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ 5 ಕಾಂಗ್ರೆಸ್ ಬೆಂಬಲಿತರು ಹಾಗೂ ಒಂದು ಬಿಜೆಪಿ, ಜೆಡಿಎಸ್ ಬೆಂಬಲಿತರು ಜಯ ಸಾಧಿಸಿದ್ದಾರೆ.

ಚಿನ್ನಕೋಟೆ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷೆ ಸುನಂದಮ್ಮ ಹಾಗೂ ಉಪಾಧ್ಯಕ್ಷ ವಿವೇಕ್ ಅವರು ಅವಿರೋಧವಾಗಿ ಆಯ್ಕೆಯಾದರಯ. ಇವರಿಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ಅಧಿಕಾರಿಯಾಗಿ ಪ್ರತಿಭಾ ಕಾರ್ಯ ನಿರ್ವಹಿಸಿದರು.

ಬೂದಿಕೋಟೆ ಹೋಬಳಿಯ ಆಲಂಬಾಡಿ ಜ್ಯೋತೇನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಾರಾಯಣಮ್ಮ, ಉಪಾಧ್ಯಕ್ಷರಾಗಿ ರಾಮು ಆಯ್ಕೆಯಾದರು. ನಾರಾಯಣಮ್ಮ ಅವರೇ ಎರಡನೇ ಅವಧಿಗೆ ಅಧ್ಯಕ್ಷರಾಗಿರುವುದು ಗಮನಾರ್ಹ.

ADVERTISEMENT

ಬಲಮಂದೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸರಸ್ವತಿ ರಾಮಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ಅವಿರೋಧವಾಗಿ ಆಯ್ಕೆಯಾದರು.

ದೋಣಿಮಡಗು ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಮಂಜುಳಾ ಜಯಣ್ಣ, ಉಪಾಧ್ಯಕ್ಷರಾಗಿ ನಾಗರತ್ನ ಅವರು ಆಯ್ಕೆಯಾಗಿದ್ದಾರೆ.

ಚಿಕ್ಕ ಅಂಕಂಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗಿರಿಜಮ್ಮ ಶ್ರೀನಿವಾಸ್, ಉಪಾಧ್ಯಕ್ಷರಾಗಿ ಶ್ರೀರಾಮ್ ಆಯ್ಕೆ ಆಗಿದ್ದಾರೆ.

ಐನೋರ ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿ ಬಿಜಿಪಿ ಹಾಗೂ ಜೆಡಿಎಸ್ ಬೆಂಬಲಿತ ಕೆ.ಜಿ.ಮಂಜುನಾಥ್, ಉಪಾಧ್ಯಕ್ಷರಾಗಿ ಶ್ವೇತಾ ಬ್ಯಾಡಬೆಲೆ ಅವರು ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.