ತ್ಯಾಜ್ಯ
ಕೋಲಾರ: ತಾಲೂಕಿನ ವಡಗೂರು ಕೆರೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ದೊಡ್ಡ ಹೋಟೆಲ್‍ಗಳ ತ್ಯಾಜ್ಯವನ್ನು ಸುರಿಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದರು.
ಹೆದ್ದಾರಿಯಲ್ಲಿನ ವಿವಿಧ ಹೋಟೆಲ್‍ನವರು ಪ್ರತಿದಿನದ ತ್ಯಾಜ್ಯವನ್ನು ಕಸವನ್ನು ಸುರಿಯುತ್ತಿದ್ದಾರೆ ಎಂದು ದೂರಿದರು.
ಇದರಿಂದಾಗಿ ಕೆರೆಯ ನೀರು ಮಲಿನಗೊಳ್ಳುತ್ತಿದ್ದು, ಜನ-ಜಾನುವಾರುಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಕೆರೆ ಪಕ್ಕದಲ್ಲೇ ಖಾಸಗಿ ಶಾಲೆಯೂ ಇದ್ದು, ಹೋಟೆಲ್‍ನವರು ಕಸವನ್ನು ಮನಬಂದಂತೆ ಸುರಿಯುತ್ತಿರುವುದರಿಂದಾಗಿ ತೀವ್ರ ಸಮಸ್ಯೆಯಾಗುತ್ತಿದೆ. ಇಷ್ಟಾದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸದಸ್ಯರು ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಕ್ರಮಕೈಗೊಂಡು ಕೆರೆಯ ಸ್ವಚ್ಛತೆ ಕಾಪಾಡುವ ಜತೆಗೆ, ವಾತಾವರಣವನ್ನು ಆರೋಗ್ಯಕರವಾಗಿ ಇರಿಸಲು ಮುಂದಾಗಬೇಕೆಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.