ADVERTISEMENT

ಕೋಲಾರ: ರಸ್ತೆಗೆ ಅಡ್ಡಲಾಗಿ ಮನೆ– ತೆರವಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2024, 14:27 IST
Last Updated 7 ಫೆಬ್ರುವರಿ 2024, 14:27 IST

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಗಾಂಡ್ಲಹಳ್ಳಿಯ ಎಸ್‌ಸಿ ಕಾಲೊನಿಯಲ್ಲಿ ರಸ್ತೆಗೆ ಅಡ್ಡಲಾಗಿ ಕಟ್ಟಿರುವ ಮನೆಯನ್ನು ತೆರವುಗೊಳಿಸಿ ಓಡಾಡಲು ಅನುವು ಮಾಡಿ ಕೊಡಬೇಕೆಂದು ಮಂಗಳವಾರ ಜಿಲ್ಲಾಧಿಕಾರಿಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಮನವಿ ಮಾಡಿದರು.

‘ಶ್ರೀನಿವಾಸಪುರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನ ಆಗಿಲ್ಲ. ಸಾರ್ವಜನಿಕರ ಓಡಾಟಕ್ಕೆ ತೊಂದರೆ ನೀಡುತ್ತಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ತೆರವು ಮಾಡದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದರು.

ಜಿಲ್ಲಾಧ್ಯಕ್ಷ ಎಂ.ನಾಗೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಮುನಿರಾಜು, ಕೋಲಾರ ತಾಲ್ಲೂಕು ಅಧ್ಯಕ್ಷ ಡಿ.ಮಂಜುನಾಥ್, ಉಪಾಧ್ಯಕ್ಷ ಎಸ್.ಮಂಜುನಾಥ್, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ವಿ.ಶ್ರೀನಾಥ್, ಉಪಾಧ್ಯಕ್ಷ ಎಚ್.ಎಂ.ಅರುಣ್ ಹಾಗೂ ಗಾಂಧಿನಗರ ಮಾಹಿತಿ ಮಂಜುನಾಥ್ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.