ಸಾದರ ಸ್ವೀಕಾರ
ಕೋಲಾರ: ಕೋಲಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಶ್ವ ವಿಕಲಚೇತನರ ದಿನಾಚರಣೆ-2025ರ ಪ್ರಯುಕ್ತ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಂಸ್ಥೆ, ವಿಶೇಷ ಶಿಕ್ಷಕರು ಮತ್ತು ವಿಕಲಚೇತನ ವ್ಯಕ್ತಿಯ ವೈಯಕ್ತಿಕ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರಿಂದ ಪಡೆದು ದಾಖಲಾತಿಗಳೊಂದಿಗಿನ ಪ್ರಸ್ತಾವನೆಯನ್ನು ಅ.27 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ: 08152-200010 ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡ್ಲ್ಯೂ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡ್ಲ್ಯೂ ರವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.