
ಪ್ರಜಾವಾಣಿ ವಾರ್ತೆ
ಎಂ.ಜಿ. ಪ್ರಭಾಕರ
ಕೋಲಾರ: ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ (76) ಅನಾರೋಗ್ಯದಿಂದ ಭಾನುವಾರ ನಗರದ ಕೋಟೆ ಬಡಾವಣೆಯ ತಮ್ಮ ನಿವಾಸದಲ್ಲಿ ನಿಧನರಾದರು.
ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಆರ್‌ಟಿಒ ಮುಂಭಾಗದ ರುದ್ರಭೂಮಿಯಲ್ಲಿ ನೆರವೇರಿತು. ಈಚೆಗೆ ಅವರ ಹಿರಿಯ ಪುತ್ರಿ ನಿಧನರಾಗಿದ್ದರು.
ಪ್ರಭಾಕರ ಹೊನ್ನುಡಿ ಪತ್ರಿಕೆ ಸಂಪಾದಕ ಹಾಗು ಪ್ರಕಾಶಕರಾಗಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶ್ರೀಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ರೈಲ್ವೆ ಹೋರಾಟ ಸಮಿತಿಯ ಸಂಚಾಲಕರಾಗಿ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.