ADVERTISEMENT

ಕುವೆಂಪು ಪುತ್ಥಳಿ ವಿರೂಪ; ಆಕ್ರೋಶ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2025, 7:58 IST
Last Updated 14 ಆಗಸ್ಟ್ 2025, 7:58 IST
ಕೋಲಾರದಲ್ಲಿ ಕುವೆಂಪು ಪುತ್ಥಳಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು
ಕೋಲಾರದಲ್ಲಿ ಕುವೆಂಪು ಪುತ್ಥಳಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು   

ಪ್ರಜಾವಾಣಿ ವಾರ್ತೆ

ಕೋಲಾರ: ನಗರದ ಅಂತರಗಂಗೆ ರಸ್ತೆಯ ಕುವೆಂಪು ಉದ್ಯಾನದಲ್ಲಿರುವ ರಾಷ್ಟ್ರಕವಿ ಕುವೆಂಪು ಪುತ್ಥಳಿಯನ್ನು ಕಿಡಿಗೇಡಿಗಳ ವಿರೂಪಗೊಳಿಸಿದ್ದು, ಆಕ್ರೋಶ ವ್ಯಕ್ತವಾಗಿದೆ.

ರಾಷ್ಟ್ರಕವಿಗೆ ಅವಮಾನ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ವಹಿಸಬೇಕೆಂದು ಕನ್ನಡ ಹೋರಾಟಗಾರರು ಹಾಗೂ ನಾಗರಿಕರು ಆಗ್ರಹಿಸಿದ್ದಾರೆ.

ADVERTISEMENT

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಹಾಗೂ ವರನಟ ಡಾ.ರಾಜ್‌ಕುಮಾರ ಅವರ ಪುತ್ಥಳಿ ಯಾವುದೇ ನಿರ್ವಹಣೆ ಇಲ್ಲದೆ ಅನಾಥವಾಗಿದ್ದು ರಕ್ಷಿಸಬೇಕು ಹಾಗೂ ಉದ್ಯಾನಕ್ಕೆ ಮೂಲಸೌಲಭ್ಯ ಕಲ್ಪಿಸಬೇಕೆಂದು ಹೋರಾಟಗಾರರು ನಗರಸಭೆಗೆ ಒತ್ತಾಯಿಸಿದ್ದಾರೆ. ಈ ಪುತ್ಥಳಿಗೆ ಕೇಕ್‌ ಬಳಿದು ವಿಕೃತಿ ಮೆರೆದಿರುವುದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.