ADVERTISEMENT

ಮುಳಬಾಗಿಲು | ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಶವವಾಗಿ ಪತ್ತೆ: ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 7:36 IST
Last Updated 4 ಅಕ್ಟೋಬರ್ 2025, 7:36 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಮುಳಬಾಗಿಲು (ಕೋಲಾರ): ತಾಲ್ಲೂಕಿನ ಯಳಚೇಪಲ್ಲಿಯಿಂದ ಗುರುವಾರ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಸಮೀಪದ ಕುಪ್ಪಂಪಾಳ್ಯ ಬಳಿ ಶನಿವಾರ ಶವವಾಗಿ ಪತ್ತೆಯಾಗಿದ್ದಾರೆ.

ADVERTISEMENT

ಧನ್ಯಬಾಯಿ (13) ಹಾಗೂ ಚೈತ್ರಾ ಬಾಯಿ (13) ಮೃತ ಬಾಲಕಿಯರು. ಇವರಿಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿದೆ. ದುಷ್ಕರ್ಮಿಗಳು ಬಾಲಕಿಯರನ್ನು ಕೊಂದು ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಬಾಲಕಿಯರು ಅ.2ರಂದು ಮುಳಬಾಗಿಲು ತಾಲ್ಲೂಕಿನ ಯಳಚೇಪಲ್ಲಿಯ ನಿವಾಸದ ಮುಂದೆ ಆಟವಾಡುತ್ತಿದ್ದರು. ಈ ವೇಳೆ ನಾಪತ್ತೆಯಾಗಿದ್ದರು. ಇಬ್ಬರೂ ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಹಾಗೂ ಮುಳಬಾಗಿಲು ಗ್ರಾಮಾಂತರ ಪೊಲೀಸರು ಭೇಟಿ‌ ನೀಡಿ ಪರಿಶೀಲಿಸಿದರು.

ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ‌ತನಿಖೆ‌ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.