ADVERTISEMENT

ಕೋಲಾರ | ತಿಮ್ಮಾಪುರ ಆಗಲಿ, ನಾನಾಗಲಿ ತಪ್ಪಿದ್ದರೆ ಶಿಕ್ಷೆಯಾಗಲಿ: ಶಾಸಕ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 5:57 IST
Last Updated 5 ಫೆಬ್ರುವರಿ 2026, 5:57 IST
ಕೊತ್ತೂರು ಮಂಜುನಾಥ್‌
ಕೊತ್ತೂರು ಮಂಜುನಾಥ್‌   

ಕೋಲಾರ: ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಆಗಲಿ, ನಾನಾಗಲಿ, ಬೇರೆ ಯಾರೇ ಆಗಲಿ ತಪ್ಪು ಮಾಡಿದ್ದರೆ ಶಿಕ್ಷೆಗೆ ಒಳಗಾಗಲೇ ಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್‌ ಹೇಳಿದರು.

ಜಿಲ್ಲೆಯ ಮುಳಬಾಗಿಲಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದನದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಈ ಬಗ್ಗೆ ಪ್ರಸ್ತಾಪಿಸಿ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ನಾನೂ ಸದನದಲ್ಲಿ ಇದ್ದೆ. ‌ಈ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌ ನಿಂದನಾತ್ಮಕ ಪದಕ ಬಳಸಿದ್ದಾರೆ ಎಂಬ ಪ್ರಶ್ನೆಗೆ, ‘ನಾನು ದೊಡ್ಡವರ ವಿಚಾರಕ್ಕೆ ಹೋಗುವುದಿಲ್ಲ. ಈಗಾಗಲೇ ಈ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಚರ್ಚೆ ನಡೆದು ಅವರು ಕ್ಷಮೆಯಾಚಿಸಿದ್ದಾರೆ. ಮಾತನಾಡುವ ಮೊದಲು ಯೋಚನೆ ಮಾಡಬೇಕು. ಕೆಲ ಸಂದರ್ಭದಲ್ಲಿ ಕೆಲ ಮಾತು ಬರುತ್ತವೆ. ಅದು ಮುಗಿದ ಕಥೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.